ಹುಬ್ಬಳ್ಳಿ: ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರದಿಂದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಪ್ರಚಾರ ವಾಹನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಹಾಗೂ ಶಾಸಕ ಅರವಿಂದ ಬೆಲ್ಲದ ಚಾಲನೆ ನೀಡಿದರು.
ಹುಬ್ಬಳ್ಳಿಯ ಜೆ.ಸಿ.ನಗರದಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದ್ದು, ಪ್ರಚಾರಕ್ಕೆ ರಾಷ್ಟ್ರೀಯ ಧ್ವಜ ತೋರಿಸುವ ಮೂಲಕ ವಿದ್ಯುಕ್ತವಾಗಿ ಆರಂಭ ಮಾಡಿದರು. ಅಲ್ಲದೇ ವಾಹನವನ್ನು ಪರಿಶೀಲನೆ ನಡೆಸಿದ ಕೇಂದ್ರ ಸಚಿವರು ಉತ್ತಮ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಯಲಿ ಎಂದು ಶುಭ ಕೋರಿದರು.
ಇನ್ನೂ ಕಾರ್ಯಕ್ರಮಕ್ಕೆ ಮೇಯರ್ ಈರೇಶ ಅಂಚಟಗೇರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರಗಿ, ಲಕ್ಷ್ಮೀಕಾಂತ ಘೋಡಕೆ ಸೇರಿದಂತೆ ಇತರ ಮುಖಂಡರು ಭಾಗವಹಿಸಿ ಅಭಿಯಾನಕ್ಕೆ ಮುನ್ನುಡಿ ಬರೆದಿದ್ದಾರೆ.
Kshetra Samachara
12/08/2022 08:50 pm