ನವಲಗುಂದ : ನವಲಗುಂದದ ಶಾಸಕರು ಹಾಗೂ ಜವಳಿ ಮತ್ತು ಕೈಮಗ್ಗ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನವಲಗುಂದ ಪಟ್ಟಣದ ತಹಶೀಲ್ದಾರ ಕಾರ್ಯಾಲಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ವಾರಸುದಾರರಿಗೆ ಸರ್ಕಾರದಿಂದ ನೀಡಲಾಗುವ ಐದು ಲಕ್ಷಗಳ ಚೆಕ್ ಹಾಗೂ ಪ್ರತಿ ತಿಂಗಳು 2 ಸಾವಿರ ಪಿಂಚಣಿಯ ಆದೇಶ ಪ್ರತಿಗಳನ್ನು ವಿತರಣೆ ಮಾಡಿದರು.
ಜೊತೆಗೆ ನಿಂತರವಾಗಿ ಸುರಿದ ಮಳೆಯಿಂದ ನೆಲಕ್ಕಚ್ಚಿದ ಮನೆಗಳ ಪರಿಹಾರಕ್ಕಾಗಿ ಬಂದಿರುವ ಅರ್ಜಿಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಿದರು. ನವಲಗುಂದದ ಪ್ರತಿ ಹಳ್ಳಿಯಲ್ಲಿ ಇರುವ ರೈತರಿಗೆ ಯಾವುದೇ ತೊಂದರೆಗಳಾಗದಂತೆ ಆಡಳಿತ ವ್ಯವಸ್ಥೆಯನ್ನು ನಡೆಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ತಹಶೀಲ್ದಾರ್ ಅನೀಲ ಬಡಿಗೇರ, ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
16/08/2022 02:07 pm