ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವ ನಿಧಿ ಯೋಜನೆಯಡಿ ಚೆಕ್ ವಿತರಣೆ

ನವಲಗುಂದ : ನವಲಗುಂದ ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವ ನಿಧಿ ಯೋಜನೆ ಅಡಿ, ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸುವ ಅಭಿಯಾನ ಕಾರ್ಯಕ್ರಮಕ್ಕೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.

ಪ್ರಧಾನ ಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ಯೋಜನೆಯಡಿ ನವಲಗುಂದದಲ್ಲಿ 115 ಸ್ವ ಸಹಾಯ ಸಂಘಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಒಟ್ಟು 1150 ಸದಸ್ಯರಿದ್ದಾರೆ. ಇವರಲ್ಲಿ ಹಲವರಿಗೆ ಹೋಲಿಗೆ ತರಬೇತಿ, ಬ್ಯಾಂಕಿನಿಂದ ಸಾಲ ಸೌಲಭ್ಯ ಕಲ್ಪಿಸಲಾಗಿದೆ.

223 ಜನರಿಗೆ ತಲಾ ಒಬ್ಬ ಸದಸ್ಯನಿಗೆ 10 ಸಾವಿರ ರೂಪಾಯಿ, ಎರಡನೇ ಹಂತದಲ್ಲಿ 50 ಜನರಿಗೆ 20 ಸಾವಿರ ಹಾಗೂ ಮೂರನೇ ಹಂತ 6 ಜನರಿಗೆ 50 ಸಾವಿರ ನೀಡಲಾಗುತ್ತಿದೆ.

ಇನ್ನು ಕಾರ್ಯಕ್ರಮದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಪುರಸಭೆ ಜನಪ್ರತಿನಿದಿನಗಳು ಹಾಗೂ ಸಿಬ್ಬಂದಿಗಳಿಂದ ಸನ್ಮಾನವನ್ನು ಮಾಡಲಾಯಿತು.

ನವಲಗುಂದ ನಗರಗದ ನಗರೋಥ್ಥಾನ ಯೋಜನೆಯ ಅಡಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ವಿವಿಧ ಕ್ರಮಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ವೀರಪ್ಪ ಹಸಬಿ, ಪುರಸಭೆ ಅಧ್ಯಕ್ಷರಾದ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷರಾದ ಪದ್ಮಾವತಿ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುರೇಶ ಮೇಟಿ, ಪುರಸಭೆ ಸರ್ವ ಸದಸ್ಯರು, ಆಸೀಫ್ ನಾಶಿಪುಡಿ, ಹೂಗಾರ, ಶೋಭಾ, ಪ್ರವೀಣ್ ಸೇರಿದಂತೆ ಆಡಳಿತ ಸಿಬ್ಬಂದಿಗಳು, ವ್ಯಾಪಾರಿ ವರ್ಗದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/08/2022 04:50 pm

Cinque Terre

11.2 K

Cinque Terre

0

ಸಂಬಂಧಿತ ಸುದ್ದಿ