ಹುಬ್ಬಳ್ಳಿ: ಸಾರ್ವಜನಿಕ ಸಮಸ್ಯೆಗಳ ಕುರಿತು ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ವರದಿಯ ಮೂಲಕ ಬೆಳಕು ಚೆಲ್ಲಿದ ಬೆನ್ನಲ್ಲೇ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಚರ್ಚೆ ಮುನ್ನೆಲೆಗೆ ಬಂದಿದೆ.
ಹೌದು... ಮೊನ್ನೆಯಷ್ಟೇ ಹುಬ್ಬಳ್ಳಿಯ ಮೂರು ಸಾವಿರ ಮಠ ಆವರಣದಲ್ಲಿ ಪೇವರ್ಸ್ ಅವ್ಯವಸ್ಥೆ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ಕುರಿತು ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿದ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರು ಪಾಲಿಕೆ ಅಧಿಕಾರಿಗಳ ಹಾಗೂ ಸಿಬ್ಬಂದಿ ವಿರುದ್ಧ ಕಿಡಿ ಕಾರಿದರು.
ಪಾಲಿಕೆ ಸದಸ್ಯ ವೀರಣ್ಣ ಸವಡಿ ಈ ಬಗ್ಗೆ ಚರ್ಚೆ ಮಾಡಿದ್ದು, ಪೇವರ್ಸ್ ಅವ್ಯವಸ್ಥೆ ಕುರಿತು ಕೂಡಲೇ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಒತ್ತಾಯಿಸಿದರು. ಈ ಕುರಿತು ಮಾತನಾಡಿದ ಪಾಲಿಕೆ ಆಯುಕ್ತರು ಕೂಡಲೇ ಅವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದರು.
Kshetra Samachara
25/08/2022 03:35 pm