ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹೋರಾಟ ನಡೆಸುತ್ತಿರುವ ವಿಷಯ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸದುದ್ದೇಶದಿಂದ ಎಡಿಜಿಪಿ ಅಲೋಕ್‌ಕುಮಾರ್ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ಮಹಾನಗರ ಪಾಲಿಕೆಯಿಂದ ಹಾಗೂ ಹು-ಧಾ ಪೊಲೀಸ್ ಕಮೀಷನರೇಟ್‌ನಿಂದ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವನ್ನು ಅನುಸರಿಸುವ ಹಾಗೂ ಸೂಕ್ತ ಪರಿಶೀಲನೆ ನಡೆಸುವ ದೃಷ್ಟಿಯಿಂದ ಎಡಿಜಿಪಿ ಅಲೋಕ್‌ಕುಮಾರ್ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು.
ಇನ್ನೂ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನದಲ್ಲಿ ಪರಿಶೀಲನೆ ನಡೆಸಿದ ಎಡಿಜಿಪಿಯವರು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಬಂದೋಬಸ್ತ್ ಪರಿಶೀಲಿಸಿದರು. ಬಳಿಕ ಹುಬ್ಬಳ್ಳಿ-ಧಾರವಾಡ ಪೊಲೀಸರಿಂದ ಮಾಹಿತಿ ಪಡೆದ ಅಲೋಕ್‌ಕುಮಾರ, ಕಮೀಷನರ್ ಹಾಗೂ ಎಸ್.ಪಿಯವರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದರು.'
Kshetra Samachara
29/08/2022 03:06 pm