ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಳೆ ಪ್ರವಾಹ ವೇಳೆ ಅವಶ್ಯಕತೆ ಇದ್ದರೆ ಮಾತ್ರ ಡಿಸಿಯಿಂದ ರಜೆ ಮಂಜೂರು: ಹಾಲಪ್ಪ ಆಚಾರ್

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಆಗಸ್ಟ್ 30ರಿಂದ ಸೆಪ್ಟೆಂಬರ್‌ 6ರವರೆಗೆ ವಿಪರೀತ ಮಳೆಯಾಗಿದ್ದು, ಜನರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಅತಿವೃಷ್ಟಿ ಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಿರಿಯ ಅಧಿಕಾರಿ ಗಮನಕ್ಕೆ ತರದೇ ಮತ್ತು ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೇ ತಮ್ಮ ಕೇಂದ್ರ ಸ್ಥಾನ ಬಿಡಬಾರದು. ಅತೀ ಜರೂರ ಇದ್ದಲ್ಲಿ ತಮಗೆ ಜಿಲ್ಲಾಧಿಕಾರಿಗಳು ರಜೆ ನೀಡುತ್ತಾರೆ. ಕೇಂದ್ರಸ್ಥಾನದಲ್ಲಿರದೇ ಇದ್ದರೆ ಮತ್ತು ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಜುಲೈ 1 ರಿಂದ ಆಗಸ್ಟ್ 31 ರವರೆಗೆ 269 ಮೀ.ಮಿ ಆಗಬೇಕಿದ್ದ ಮಳೆ 311 ಮೀ.ಮಿ ಆಗಿದೆ. ಶೇ.15 ರಷ್ಟು ಹೆಚ್ಚುವರಿ ಆಗಿದೆ. ಮತ್ತು ಆಗಸ್ಟ್ 31ರಿಂದ ಸೆಪ್ಟೆಂಬರ್ 9 ರೊಳಗೆ ಸಾಮಾನ್ಯವಾಗಿ ಆಗಬೇಕಿದ್ದ 19.62 ಮೀ.ಮಿ. ಮಳೆ, 84.8 ಮೀ.ಮಿ.ಮಳೆ ಆಗಿದೆ. ಅಂದರೆ ಶೇ. 333 ರಷ್ಟು ಅತಿ ಹೆಚ್ಚು ಮಳೆ ಆಗಿದೆ. ಇದರಿಂದಾಗಿ ಧಾರವಾಡ, ಕುಂದಗೋಳ, ಅಣ್ಣಿಗೇರಿ, ಹುಬ್ಬಳ್ಳಿ ಗ್ರಾಮೀಣ ಮತ್ತು ನವಲಗುಂದ, ಕಲಘಟಗಿ ತಾಲೂಕುಗಳಲ್ಲಿ ಅಪಾರ ಪ್ರಮಾಣದ ಬೆಳೆ, ಮನೆ ಹಾನಿ ಆಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿವೃಷ್ಟಿ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಸಭೆಗೆ ವಿವರಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ವೇದಿಕೆಯಲ್ಲಿದ್ದರು.

Edited By : Manjunath H D
Kshetra Samachara

Kshetra Samachara

11/09/2022 11:08 am

Cinque Terre

25.11 K

Cinque Terre

2

ಸಂಬಂಧಿತ ಸುದ್ದಿ