ಹುಬ್ಬಳ್ಳಿ: ಇದೇ ಸೆ.26ಕ್ಕೆ ಹುಬ್ಬಳ್ಳಿ ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬರುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಮಾಧ್ಯಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರತಿಕ್ರಿಯೆ ನೀಡಿದರು.
ದೇಶಪಾಂಡೆ ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾಷ್ಟ್ರಪತಿ ಅವರು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿರುವ ಕಾರಣ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದ್ದು, ಇಂದು ಸಾಯಂಕಾಲದ ವರೆಗೂ ಎಲ್ಲ ಸಿದ್ಧತೆಗಳನ್ನು ಮಾಡಿ ಮುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರತಿಕ್ರಿಯೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/09/2022 01:23 pm