ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಗ್ರಾ.ಪಂ‌.ಚುನಾವಣೆಗೆ ಜಾಗೃತಿ ಮೂಡಿಸಲು ಬರತೈತಿ ಈ ತಂಡ..

ಧಾರವಾಡ : ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಕೋವಿಡ್ ಮತ್ತು ಗ್ರಾ.ಪಂ‌.ಚುನಾವಣೆ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಇಂದು ನಗರದ ಜಿಲ್ಲಾ ಪಂಚಾಯತ ಆವರಣದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ.ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಲಾವಿದರು ಕೊರೊನಾ ಜಾಗೃತಿ ಹಾಗೂ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದ ಬೀದಿನಾಟಕ ಮತ್ತು ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸಿದರು

ಜಿ.ಪಂ.ಯೋಜನಾ ನಿರ್ದೇಶಕ ಬಿ.ಎಸ್.ಮೂಗನೂರಮಠ,ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ವಾರ್ತಾ ಸಹಾಯಕ ಡಾ.ಸುರೇಶ್ ಹಿರೇಮಠ ಮತ್ತಿತರರು ಇದ್ದರು.

ಕುಂದಗೋಳ ತಾಲೂಕಿನ ಹರ್ಲಾಪುರದ ಸಿವೈಸಿಡಿ ಕಲಾತಂಡದ ಸದಸ್ಯರು 10 ದಿನಗಳ ಕಾಲ 20 ಗ್ರಾಮಗಳಲ್ಲಿ ಬೀದಿನಾಟಕ ಮತ್ತು ಜನಪದ ಸಂಗೀತದ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.

Edited By : Manjunath H D
Kshetra Samachara

Kshetra Samachara

10/12/2020 04:59 pm

Cinque Terre

44.79 K

Cinque Terre

2

ಸಂಬಂಧಿತ ಸುದ್ದಿ