ಹುಬ್ಬಳ್ಳಿ - ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಲಾಕ್ ಡೌನ್ ಕುರಿತು ಜನವರಿ 7 ರಂದು ನಡೆಯೋ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ತಜ್ಞರ ವರದಿಯನ್ನು ಆಧರಿಸಿ ಮುಖ್ಯಮಂತ್ರಿಗಳು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪಾಸಿಟಿವಿಟಿ ರೇಟ್ ಗೆ ಅನುಗುಣವಾಗಿ ಲಾಕ್ ಡೌನ್ ತೀರ್ಮಾನ ಕೈಗೊಳ್ಳಲಾಗುತ್ತದೆ. ಲಾಕ್ ಡೌನ್ ವಿಚಾರದಲ್ಲಿ ನನ್ನ ಮತ್ತು ಕೆಲ ಸಚಿವರು, ಶಾಸಕರ ಅಭಿಪ್ರಾಯ ಮುಖ್ಯವಲ್ಲ
ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮೊದಲಾದ ಕಡೆ ಕೊರೋನಾ ಉಲ್ಬಣ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ವರದಿ ಆಧರಿಸಿ ಲಾಕ್ ಡೌನ್ ನಿರ್ಧಾರ ಕೈಗೊಳ್ಳುತ್ತೆವೆ ಎಂದರು. ಕೋವಿಡ ನಿಯಂತ್ರಣದ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/01/2022 03:40 pm