ಹುಬ್ಬಳ್ಳಿ: ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ ಫ್ರಂಟ್ ಲೈನ್ ವಾರಿಯರ್ಸ್‌ಗಳಿಗೆ ಸನ್ಮಾನಿಸಿ ಗೌರವಿಸುವ ದೃಷ್ಟಿಯಿಂದ ರಜತ್ ಫೌಂಡೇಶನ್ ನೇತೃತ್ವದಲ್ಲಿ "ರಜತ ಸಂಭ್ರಮ" ಇದು ಸೇವೆ ಅಲ್ಲ ಕರ್ತವ್ಯ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಫೆ.14 ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಮೂರುಸಾವಿರ ಮಠದ ಆವರಣದಲ್ಲಿ ಚಾಲನೆ ನೀಡಲಾಗುವುದು ಎಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ, ಇನ್ನರ್ ವಿಲ್ ಕ್ಲಬ್ ಆಫ್ ಹುಬ್ಬಳ್ಳಿ ಸಹಯೋಗದಲ್ಲಿ ನಡೆಯುತ್ತಿರುವ ರಜತ್ ಸಂಭ್ರಮ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಹಾಗೂ ದಾದಿಯರು ಸೇರಿದಂತೆ ಎಲ್ಲ ಫ್ರಂಟ್ ಲೈನ್ ವಾರಿಯರ್ ಗಳಿಗೆ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಏ.14 ರವರೆಗೆ ನಿರಂತರ ಎರಡು ತಿಂಗಳು ನಡೆಯಲಿದೆ. ಅಲ್ಲಿಯವರೆಗೆ ಧಾರವಾಡ ಜಿಲ್ಲೆಯಲ್ಲಿನ ಸುಮಾರು ಹತ್ತು ಸಾವಿರ ಕೊರೊನಾ ವಾರಿಯರ್‌ಗಳಿಗೆ ಗೌರವಿಸಲಾಗುವುದು ಎಂದು ತಿಳಿಸಿದರು.
ರಜತ್ ಸಂಭ್ರಮ ಕಾರ್ಯಕ್ರಮಕ್ಕೆ ಮೂರು ಸಾವಿರಮಠದ ಸ್ವಾಮೀಜಿ ಚಾಲನೆ ನೀಡಲಿದ್ದು, ಅವಳಿನಗರದ ಮುಂತಾದ ಗಣ್ಯಮಾನ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
Kshetra Samachara
12/02/2022 03:56 pm