ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆಯುರ್ವೇದ ವಾಣಿಜ್ಯೀಕರಣ ಅಪಾಯಕಾರಿ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಆಯುರ್ವೇದವನ್ನು ವಾಣಿಜ್ಯೀಕರಣಗೊಳಿಸುವುದು ತುಂಬಾ ಅಪಾಯಕಾರಿ. ‌ಇದರಿಂದ ಆಯುರ್ವೇದಕ್ಕೆ ಯಾವುದೇ ರೀತಿಯ ಅನುಕೂಲವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಹುಬ್ಬಳ್ಳಿಯ ಬಸವೇಶ್ವರ ನಗರದಲ್ಲಿ ಸಂಜೀವಿನಿ ಆಯುರ್ವೇದ ವೈದ್ಯಕೀಯ ಕಾಲೇಜ್ ಹಾಗೂ ಆಸ್ಪತ್ರೆಯಿಂದ ಆಯೋಜಿಸಲಾಗಿರುವ 'ಆಯುಷ್ ಎಕ್ಸ್‌ಪೋ'ದಲ್ಲಿ ಭಾನುವಾರ 2ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, 'ಆಯುರ್ವೇದ ಔಷಧಿಗಳನ್ನು ಬೃಹತ್ ಪ್ರಮಾಣದಲ್ಲಿ ಉತ್ಪಾದನೆ ಮಾಡಲು ಸಾಧ್ಯವಿಲ್ಲ. ಇದು ಆಯುರ್ವೇದದ ಮೂಲ ಸಿದ್ಧಾಂತಕ್ಕೆ ವಿರುದ್ಧವಾದದ್ದು. ಆಯುರ್ವೇದಕ್ಕೆ ಒಳ್ಳೆಯ ಭವಿಷ್ಯವಿದೆ. ಇಂತಹ ಅವಕಾಶವನ್ನು ಕಳೆದುಕೊಳ್ಳಬೇಡಿ' ಎಂದು ಸಲಹೆ ನೀಡಿದರು.

ಅಲೋಪಥಿ ಚಿಕಿತ್ಸೆಯು ದುಬಾರಿಯಾಗಿದ್ದು, ಆಯುರ್ವೇದವು ಬಡವರ ಮೆಡಿಸಿನ್ ಆಗಿದೆ. ಇದನ್ನು ವ್ಯಾಪಕವಾಗಿ ಹಾಗೂ ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ತಪ್ಪಾಗಿ ಮಾರ್ಕೆಟಿಂಗ್ ‌ಮಾಡಬಾರದು ಎಂದು ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಡಾ.‌ ಕೆ.ಎಸ್. ಶರ್ಮಾ, ಡಾ. ಶ್ರೀನಿವಾಸ ಬನ್ನಿಗೊಳ, ಮೋಹನ ಲಿಂಬಿಕಾಯಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಸುರೇಶ ಕುಲಕರ್ಣಿ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

24/04/2022 01:13 pm

Cinque Terre

16.34 K

Cinque Terre

0

ಸಂಬಂಧಿತ ಸುದ್ದಿ