ನವಲಗುಂದ : ಭಾರತ ಚುನಾವಣಾ ಆಯೋಗದಿಂದ 2022 ಜೂನ್ 13 ರಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ನವಲಗುಂದ ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ಸೋಮವಾರ ನಡೆಯಲಿರುವ ಮತದಾನ ಪ್ರಕ್ರಿಯೆ ನಿಮಿತ್ತ ಭಾನುವಾರ ಸ್ಯಾನಿಟೈಸಿಂಗ್ ಮಾಡಲಾಯಿತು.
ನವಲಗುಂದ ಪುರಸಭೆ ವತಿಯಿಂದ ನವಲಗುಂದ ಮಿನಿ ವಿಧಾನ ಸೌಧದ ಮತಗಟ್ಟೆಯನ್ನು ಸಂಪೂರ್ಣ ಸ್ಯಾನಿಟೈಸಿಂಗ್ ಮಾಡಲಾಯಿತು. ಜೂನ್ 13 ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ಪ್ರಕ್ರಿಯೆ ಜರುಗಲಿದೆ. ಮತದಾನಕ್ಕೆ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ.
ಕೋವಿಡ್-19 ಹಿನ್ನಲೆಯಲ್ಲಿ ಎಲ್ಲ ಮತಗಟ್ಟೆಗಳಿಗೆ ಕೋವಿಡ್ ಮಾರ್ಗಸೂಚಿಯಂತೆ ಸ್ಯಾನಿಟೈಸಿಂಗ್, ಪಲ್ಸ್ಆಕ್ಸಿಮೀಟರ್, ಥರ್ಮಾಮೀಟರ್ ಗಳನ್ನು ಆರೋಗ್ಯ ಇಲಾಖೆಯಿಂದ ಒದಗಿಸಲಾಗಿದೆ.
ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಸಿಬ್ಬಂದಿಗಳೊಂದಿಗೆ ಮೈಕ್ರೋ ಆಬ್ಸರ್ವರ್, ಪೊಲೀಸ್ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಬಿಎಲ್‌ಓ ಅವರನ್ನು ಸೇವೆಗೆ ನಿಯೋಜಿಸಲಾಗಿದೆ.
Kshetra Samachara
12/06/2022 12:42 pm