ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಾರ್ವಜನಿಕರಿಗೊಂದು ರೂಲ್ಸ್ ಬಿಜೆಪಿ ಕಾರ್ಯಕರ್ತರಿಗೊಂದು ರೂಲ್ಸ್

ವರದಿ: ಈರಣ್ಣ ವಾಲಿಕಾರ

ಹುಬ್ಬಳ್ಳಿ: ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕ್‌ಡೌನ್ ಆಗುತ್ತೋ ಎಂಬ ಭಯದಲ್ಲಿ ಸಾರ್ವಜನಿಕರಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಕೆಲ ಕಾರ್ಯಕರ್ತರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ರಸ್ತೆಗೆ ಇಳಿಯುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ರೂಪಾಂತರ ಒಮ್ರಿಕಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಲಾಕ್‌ಡೌನ್ ಜಾರಿ ಮಾಡಿದೆ. ಆದರೆ ಇತ್ತ ಬಿಜೆಪಿ ಕಾರ್ಯಕರ್ತರು ನಮಗೂ ಸರ್ಕಾರದ ನಿಯಮಕ್ಕೂ ಸಂಬಂಧ ವಿಲ್ಲದಂತೆ, ನೂರಾರು ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ವೈಫಲ್ಯ ಆಗಿರುವುದು ಎಲ್ಲರಿಗೂ ತಿಳಿದ ವಿಚಾರ. ಇದನ್ನೇ ಬಂಡವಾಳಗಿಟ್ಟುಕೊಂಡು ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಮಾಡುತ್ತಿದ್ದಾರೆ. ಅದೇ ರೀತಿ ಹುಬ್ಬಳ್ಳಿ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಮಾಡುವ ಮುಖಾಂತರ ಮುತ್ತಿಗೆ ಹಾಕಿದ್ದಾರೆ. ಇದನ್ನೆಲ್ಲ ನೋಡುತ್ತಿದ್ದರೆ ಸಾರ್ವಜನಿಕರಿಗೆ ಒಂದು ನ್ಯಾಯ ಬಿಜೆಪಿ ಕಾರ್ಯಕರ್ತರಿಗೆ ಇನ್ನೊಂದು ನ್ಯಾಯ ಎಂಬಂತಾಗಿದೆ ಎಂದು ಸಾರ್ವಜನಿಕರಲ್ಲಿ ಪ್ರಶ್ನೆಯಾಗಿದೆ.

ಕೋವಿಡ್ ನಿಯಮದಂತೆ ಪ್ರತಿಭಟನೆ, ಪಾದಯಾತ್ರೆ ನಡೆಸಲು ಅನುಮತಿಯೇ ಇಲ್ಲ. ಇಷ್ಟಾದ್ರೂ 200ಕ್ಕೂ ಹೆಚ್ಚು ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಪ್ರತಿಭಟನೆ ನಡೆಸಿದ್ದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ.

ಇನ್ನೂ ಬೈಕ್ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಇಲ್ಲ ಎಂದು ದಂಡ ವಸೂಲಿ ಮಾಡುತ್ತಿರುವ ಪೊಲೀಸರು. ಪ್ರತಿಭಟನೆಯಲ್ಲಿ ಯಾರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ? ಇವರಿಗೆ ರಾಜಕೀಯ ಒತ್ತಡ ಇದೇಯಾ ಎಂದು ಹುಬ್ಬಳ್ಳಿ ಜನತೆ ಆಕ್ರೋಶಗೊಂಡಿದ್ದಾರೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/01/2022 04:00 pm

Cinque Terre

92.47 K

Cinque Terre

21

ಸಂಬಂಧಿತ ಸುದ್ದಿ