ಹುಬ್ಬಳ್ಳಿ : ಆನ್ ಲಾಕ್ ಬಳಿಕ ಶಾಲೆಗಳ ಆರಂಭದ ಬಗ್ಗೆ ಪಾಲಕರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಪೋಷಕರಿಗೆ ನಮ್ಮ ಮಕ್ಕಳು ಸುರಕ್ಷಿತ ಎಂಬ ಭಾವನೆ ಬರುವ ತನಕ ಶಾಲೆಗಳನ್ನು ಆರಂಭಿಸೋದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶಾಲೆ ತೆರೆಯುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡವಿದೆ.ಬೇಕಿದ್ದರೆ ಕೆಲವು ಶಾಲೆಗಳನ್ನು ಪ್ರಾಯೋಗಿಕವಾಗಿ ಆರಂಭಿಸಲಿ.ಸಾಧಕ ಬಾಧಕ ನೋಡಿಕೊಂಡ ನಂತರ ಶಾಲೆಗಳನ್ನು ಪ್ರಾರಂಭಿಸಬಹುದು ಎಂದ ಅವರು,ಪಾಲಕರಲ್ಲಿ ಸದ್ಯಕ್ಕೆ ಭಯದ ವಾತಾವರಣವಿದೆ.ತಕ್ಷಣವೇ ಎಲ್ಲಾ ಶಾಲೆಗಳನ್ನು ಪ್ರಾರಂಭಿಸುವುದರಿಂದ ಸಮಸ್ಯೆಗಳು ಎದುರಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲೆಗಳ ಆರಂಭದ ಕುರಿತು ಶಿಕ್ಷಣ ಸಚಿವರ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು,ಶಿಕ್ಷಣ ಸಚಿವರು ಬರೆದಿರುವ ಪತ್ರ ನನಗೆ ಬಂದಿಲ್ಲ, ಈ ಕುರಿತು ನಾನು ಏನನ್ನೂ ಹೇಳುವುದಿಲ್ಲ. ಇಷ್ಟು ದಿನ ನಾವು ಅಧಿವೇಶನದಲ್ಲಿ ಇದ್ವಿ, ಅಲ್ಲಿಯೆ ಚರ್ಚಿಸಿಬಹುದಿತ್ತು.ಪತ್ರ ಬರೆದರೆ ಏನ್ ಹೇಳೋದು?ಎಂದು ಪ್ರಶ್ನಿಸಿದರು.
ಸಚಿವ ಸಂಪುಟ ಪುನರ್‌ರಚನೆ ಮತ್ತು ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್‌ರಚನೆ ಮತ್ತು ವಿಸ್ತರಣೆ ಸಿಎಮ್ ವಿವೇಚನೆಗೆ ಬಿಟ್ಟದ್ದು.ಸಿಎಮ್ ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ ಎಂದ ಅವರು, ಬಹಳಷ್ಟು ಸರ್ಕಸ್ ಮಾಡಿ ಸರ್ಕಾರ ನಡೆಸುತ್ತಿದ್ದೇವೆ.ಹೊಸಬರು ಬಂದಿದ್ದು, ಅವರಿಗೆ ಆದ್ಯತೆ ಕೊಡಬೇಕಾಗುತ್ತೆ.
ಹಳಬರಲ್ಲಿ ಸೀನಿಯರ್‌ಗಳಿಗೆ ಆದ್ಯತೆ ಕೊಡಬೇಕಾಗುತ್ತೆ.ವರಿಷ್ಠರಾಗಲಿ, ಸಿಎಂ ಆಗಲಿ ನನ್ನ ಅಭಿಪ್ರಾಯ ಕೇಳಿಲ್ಲಾ.ಹೀಗಾಗಿ ಸಚಿವ ಸಂಪುಟದ ಬಗ್ಗೆ ಏನೂ ಹೇಳುವ ಪರಿಸ್ಥಿತಿಯಲ್ಲಿ ನಾನಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
Kshetra Samachara
29/09/2020 02:52 pm