ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕಿ ಕುಸುಮಾವತಿ ಕೋವಿಡ್ ವರದಿ ನೆಗೆಟಿವ್

ಕುಂದಗೋಳ : ಶಾಸಕಿ ಕುಸುಮಾವತಿ ಶಿವಳ್ಳಿ ಅವರ ವಾಹನ ಚಾಲಕ ಹಾಗೂ ಆಪ್ತ ಸಹಾಯಕನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕುಸುಮಾವತಿಯವರು ಹೋಂ ಕ್ವಾರಂಟೈನ್ ಒಳಗಾಗಿದ್ದರು.

ಸದ್ಯ ಅವರ ಕೊರೊನಾ ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಶಾಸಕರ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ. ಬುಧವಾರ ಕುಂದಗೋಳ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಮಾಡಲಾಗಿದ್ದು ವರದಿ ನೆಗೆಟಿವ್ ಎಂದು ಬಂದಿದ್ದು ಸದ್ಯ ಶಾಸಕರು ಸಂಪೂರ್ಣ ಗುಣಮುಖರಾಗಿ ಕ್ಷೇತ್ರದ ಜನರ ಸೇವೆಗೆ ಮುಂದಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

01/10/2020 12:20 pm

Cinque Terre

15.1 K

Cinque Terre

0

ಸಂಬಂಧಿತ ಸುದ್ದಿ