ಹುಬ್ಬಳ್ಳಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು, ಡಿ.ಕೆ.ಶಿವಕುಮಾರ ತಪ್ಪು ಮಾಡಿದ್ದರೆ ಅವರು ಶಿಕ್ಷೆ ಅನುಭವಿಸಬೇಕು. ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದು ಬಿಜೆಪಿಯ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ ಹೇಳಿದರು.
ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನವರು 70 ವರ್ಷಗಳ ಕಾಲ ಇದನ್ನೆ ಮಾಡಿದ್ದಾರೆ. ಅದಕ್ಕೆ ಅವರು ರಾಜಕೀಯ ಪ್ರೇರಿತ ಎನ್ನುತ್ತಾರೆ. ಕಾಂಗ್ರೆಸ್ನವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
Kshetra Samachara
06/10/2020 12:55 pm