ಹುಬ್ಬಳ್ಳಿ: ಕೃಷಿಕರ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡರುವುದು ಸ್ವಾಗತಾರ್ಹವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ.ಅದು ದೇಶದ ಕೃಷಿ ಉತ್ಪನ್ನಕ್ಕಾಗಿ ಮಾರುಕಟ್ಟೆ ಸೃಷ್ಟಿಸುವುದು ಹಾಗೂ ಕನಿಷ್ಟ ಬೆಂಬಲ ದರ ಹೆಚ್ಚಿಸುವುದು ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರವಾಗಿದೆ ಎಂದರು.
ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆಯಿಂದ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ.ಬಿಜೆಪಿ ಸರ್ಕಾರ ರೈತರ ಅಳಲನ್ನು ಆಲಿಸುವ ಹಾಗೂ ಪರಿಹಾರ ನೀಡುವ ಕಾರ್ಯವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.
ಭೂ ಸುಧಾರಣೆ ಕಾಯಿದೆ ತಿದ್ದುಪಡಿ ಕುರಿತು ಮಾತನಾಡಿದ ಅವರು,ಭೂ ಸುಧಾರಣೆ ಕಾಯಿದೆಯಿಂದ ಯಾವುದೇ ರೈತರಿಗೆ ಅನ್ಯಾಯವಾಗುವುದಿಲ್ಲ.ಅಲ್ಲದೇ ಯಾವುದೇ ರೀತಿಯಲ್ಲಿ ಬಿಜೆಪಿ ಬಂಡವಾಳ ಶಾಹಿಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,ರಾಜ್ಯದ ಹಿತದೃಷ್ಟಿಯಿಂದ ಸಿಎಂ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ.ಆದರೇ ಇದರಲ್ಲಿ ಸಿಎಂ ಬದಲಾವಣೆ ವಿಚಾರವಿಲ್ಲ.ಸಿಎಂ ಯಡಿಯೂರಪ್ಪ ಅವರು ಪೂರ್ಣಾವಧಿಯ ಸಿಎಂ ಆಗಿ ಅಧಿಕಾರ ನಡೆಸಲಿದ್ದಾರೆ ಎಂದು ಅವರು ಹೇಳಿದರು.
Kshetra Samachara
22/09/2020 01:19 pm