ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೆಲ್ಲದ ನಿವಾಸದ ಎದುರು ಪೌರಕಾರ್ಮಿಕರ ಪ್ರತಿಭಟನೆ: ಸಮಸ್ಯೆಗೆ ಸ್ಪಂದಿಸಲು ಶಾಸಕರ ಭರವಸೆ

ಹುಬ್ಬಳ್ಳಿ: ಏಕಾಏಕಿ ಪೌರ ಕಾರ್ಮಿಕರನ್ನು ಕೆಲಸದಿಂದ ಕೈಬಿಟ್ಟಿದ್ದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ನೂರಾರು ಪೌರ ಕಾರ್ಮಿಕರು ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ನಿವಾಸದ ಎದುರು ಧರಣಿ ನಡೆಸಿದರು.

ಹುಬ್ಬಳ್ಳಿಯ ಇಂದ್ರಪ್ರಸ್ಥ ನಗರದ ಬೆಲ್ಲದ್ ನಿವಾಸದ ಮುಂದೆ ಧರಣಿ ನಡೆಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು. ದುರುದ್ದೇಶದಿಂದ ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕ ಅರವಿಂದ ಬೆಲ್ಲದ್‌ಗೆ ಮನವಿ ಸಲ್ಲಿಸಿದರು. ಪೌರ ಕಾರ್ಮಿಕರ ಅಹವಾಲು ಸ್ವೀಕರಿಸಿದ ಶಾಸಕ ಅರವಿಂದ ಬೆಲ್ಲದ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Edited By :
Kshetra Samachara

Kshetra Samachara

03/12/2020 08:38 pm

Cinque Terre

94.07 K

Cinque Terre

2

ಸಂಬಂಧಿತ ಸುದ್ದಿ