ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಾವರ್ಕರ್ ಫೋಟೋ ವಿವಾದಕ್ಕೆ ಪಾಲಿಕೆ ಬ್ರೇಕ್; ಏಕಾಏಕಿ ಫೋಟೋ ಫ್ಲೆಕ್ಸ್ ತೆರವು

ಹುಬ್ಬಳ್ಳಿ: ಈದ್ಗಾ ಮೈದಾನ ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ ಹು-ಧಾ ಮಹಾನಗರ ಪಾಲಿಕೆ ತೆರೆ ಎಳೆದಿದ್ದು, ಸಾವರ್ಕರ್ ಫೋಟೊ ಇರುವ ಫ್ಲೆಕ್ಸ್ ತೆರವುಗೊಳಿಸುವ ಮೂಲಕ ವಿವಾದಕ್ಕೆ ಬ್ರೇಕ್ ಹಾಕಿದೆ.

ಹೌದು. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದೆ. ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್‌ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.

ನಿನ್ನೆಯಷ್ಟೇ ಪ್ರಮೋದ್ ಮುತಾಲಿಕ್ ಅವರು ಸಾವರ್ಕರ್ ಫೋಟೋ ಪ್ರದರ್ಶನ ಮಾಡುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು. ಆದರೆ ಹು-ಧಾ ಮಹಾನಗರ ಪಾಲಿಕೆ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ತೆರವು ಮಾಡಿದೆ.

ನಿನ್ನೆ ಪೊಲೀಸರ ವಿರೋಧ ಲೆಕ್ಕಿಸದೇ ಫ್ಲೆಕ್ಸ್ ಹಾಕಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ವಿವಾದಕ್ಕೆ ಅಡಿಪಾಯ ಹಾಕಿದ್ದರು. ಆದರೆ ಗಣೇಶ ಮೂರ್ತಿ ಹೊರತುಪಡಿಸಿ ಯಾವುದೇ ಮೂರ್ತಿ, ಫೋಟೊ, ಫ್ಲೆಕ್ಸ್ ಅಳವಡಿಸುವಂತಿಲ್ಲ ಎಂಬುವಂತ ನಿಬಂಧನೆ ಹಾಕಿದ್ದ ಪಾಲಿಕೆ ಏಕಾಏಕಿ ತೆರವು ಮಾಡಿದೆ.

Edited By : Somashekar
Kshetra Samachara

Kshetra Samachara

01/09/2022 01:41 pm

Cinque Terre

35.79 K

Cinque Terre

0

ಸಂಬಂಧಿತ ಸುದ್ದಿ