ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮಾಲಿ ಕಾರ್ಮಿಕರು ಇಲ್ಲಿನ ಅಮರಗೋಳದ ಎಪಿಎಂಸಿ ಆಡಳಿತ ಕಚೇರಿ ಎದುರು ಸಾಮೂಹಿಕ ಧರಣಿ ನಡೆಸಿದರು.
ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಮೂಲಕ, ಒಂದು ಲಕ್ಷ ಹಮಾಲಿ ಕಾರ್ಮಿಕ ಉದ್ಯೋಗ ಕಸಿದುಕೊಳ್ಳಲು ಹೊರಟಿದೆ. ಕೂಡಲೇ ಕಾಯಿದೆ ವಾಪಾಸ್ಸಾತಿ ಮಾಡಬೇಕು.
ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಮತ್ತು ರೇಷನ್ ಕಿಟ್ ವಿತರಣೆ ಮಾಡಬೇಕು. ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಜಾರಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ ಸೇರಿದಂತೆ ಮುಂತಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮಾಲಿ ಕಾರ್ಮಿಕರು ಒತ್ತಾಯಿಸಿದರು.
ಧರಣಿಯಲ್ಲಿ ಸಿಐಟಿಯು ನ ಅಧ್ಯಕ್ಷ ಕೆ.ಮಹಾಂತೇಶ, ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಮುಖಂಡರಾದ ಡಾ.ಗಣೇಶ ದೇವಿ ಸೇರಿದಂತೆ ನೂರಾರು ಹಮಾಲಿ ಕಾರ್ಮಿಕರು ಉಪಸ್ಥಿತರಿದ್ದರು.
Kshetra Samachara
23/09/2020 06:08 pm