ಧಾರವಾಡ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 71ನೇ ವರ್ಷದ ಜನ್ಮ ದಿನದ ಸಂಭ್ರಮ. ಹೀಗಾಗಿ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ನಾನಾ ರೀತಿಯಲ್ಲಿ ಮೋದಿ ಅವರ ಜನ್ಮ ದಿನವನ್ನು ಆಚರಣೆ ಮಾಡುತ್ತಿದ್ದಾರೆ.
ಇದರ ಮಧ್ಯೆ ಧಾರವಾಡದ ಕೆಲಗೇರಿಯ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು, ಬಾಳೆ ಎಲೆಯಲ್ಲಿ ನರೇಂದ್ರ ಮೋದಿ ಅವರು ಭಾವಚಿತ್ರ ಬಿಡಿಸಿ ಅವರಿಗೆ ಜನ್ಮ ದಿನದ ಶುಭಾಶಯ ಕೋರಿದ್ದಾರೆ.
ಸದಾ ಒಂದಿಲ್ಲೊಂದು ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮಂಜುನಾಥ ಹಿರೇಮಠ, ಇಂದು ಬಾಳೆ ಎಲೆಯಲ್ಲಿ ಮೋದಿ ಅವರ ಭಾವಚಿತ್ರ ಬಿಡಿಸಿ ಗಮನಸೆಳೆದಿದ್ದಾರೆ.
Kshetra Samachara
17/09/2021 11:32 am