ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಚಿವ ಜಗದೀಶ್ ಶೆಟ್ಟರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ , ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್‌ ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು.

ಹುಬ್ಬಳ್ಳಿಯ ಕೋಟಿಲಿಂಗನಗರಕ್ಕೆ ಭೇಟಿ ನೀಡಿದ ಸಚಿವರು ಕುಡಿಯುವ ನೀರಿನ ಕಾಮಗಾರಿ ವೀಕ್ಷಿಸಿದರು . ನಗರದ ನ್ಯೂಕಟ್ ಮಾರ್ಕೆಟ್, ವಿಭಾಗೀಯ ರೈಲ್ವೇ ವ್ಯವಸ್ಥಾಪಕ ಕಚೇರಿಯ ಬಳಿ ಸಿ.ಆರ್.ಎಫ್ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಸಿ.ಸಿ. ರಸ್ತೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಚಿವರು , ಲೋಕೋಪಯೋಗಿ ಹಾಗೂ ಮಹಾನಗರ ಪಾಲಿಕೆ ಸನ್ವಯದಿಂದ ಕೆಲಸ ನಿರ್ವಹಿಸಬೇಕು. ಸಣ್ಣ ಪುಟ್ಟ ತೊಂದರೆಗಳಿಂದ ಕಾಮಗಾರಿ ಕುಂಠಿತಗೊಳ್ಳಬಾರದು . ಪ್ರತಿಯೊಂದು ಹಂತದಲ್ಲೂ ಮಂತ್ರಿಗಳು ಸ್ವತಃ ಆಗಮಿಸಿ ಕಾಮಗಾರಿ ತ್ವರಿತಗೊಳಿಸಲು ಹೇಳುವಂತೆ ಆಗಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸಬೇಕು.ಅನಗತ್ಯವಾಗಿ ಮರಗಳನ್ನು ಕಡಿಯಬೇಡಿ . ಬೆಂಗಳೂರು ಮಾದರಿಯಲ್ಲಿ ಮರಗಳನ್ನು ಉಳಿಸಿ ರಸ್ತೆ ನಿರ್ಮಿಸಿ , ತಾಂತ್ರಿಕ ತೊಂದರೆಗಳು, ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸದ್ದರೆ, ಗಮನಕ್ಕೆ ಅವುಗಳಿಗೆ ಪರಿಹಾರ ಕಂಡುಕೊಳ್ಳಿ ಎಂದು ಅಧಿಕಾರಿಗಳಿಗೆ ಹೇಳಿದರು.

ಗೋಪನಕೊಪ್ಪ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಂಸದರು ಹಾಗೂ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಶಾಲಾ ಕೊಠಡಿಗಳನ್ನು ಕಾಮಗಾರಿಯನ್ನು ವೀಕ್ಷಿಸಿದರು.ಸ್ಮಾಟ್ ಸಿಟಿ ಯೋಜನೆಯಡಿ ರಾಜಾಜಿನಗರ ಸರ್ಕಲ್ ದೇವಾಂಗ ಪೇಟೆಯ ಬಳಿ ನಿರ್ಮಿಸಲಾಗುತ್ತಿರುವ ಸಾರ್ವಜನಿಕ ಶೌಚಾಲಯ ಕಾಮಗಾರಿ ಪರಿಶೀಲನೆ ನಡೆಸಿದರು.

Edited By : Manjunath H D
Kshetra Samachara

Kshetra Samachara

02/11/2020 08:21 pm

Cinque Terre

27.17 K

Cinque Terre

5

ಸಂಬಂಧಿತ ಸುದ್ದಿ