ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಈಗಾಗಲೇ ಯಶಸ್ವಿಯಾಗಿದೆ. ಇದರಿಂದಾಗಿ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಸಹಕಾರಿಯಾಗಿದೆ. ಹೀಗಿದ್ದಾಗ ರಾಜ್ಯದ ಕೆಲವು ಕಡೆಗಳಲ್ಲಿ ಶಕ್ತಿ ಯೋಜನೆಯಿಂದಾಗಿ ಕೆಲವು ಕಡೆಗಳಲ್ಲಿ ಬಸ್ಸುಗಳ ಕೊರತೆಯಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಸಮಸ್ಯೆಯಾಗಿತ್ತು. ಅದರಂತೆ ಧಾರವಾಡ ಜಿಲ್ಲೆಯಲ್ಲಿ ಬಸ್ಸುಗಳ ಕೊರತೆಯಿದ್ದು ರಾಜ್ಯ ಸರ್ಕಾರ ಜಿಲ್ಲೆಗೆ ಹೆಚ್ಚಿನ ಬಸ್ಸುಗಳನ್ನು ನೀಡಬೇಕೆಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಮಿತಿಯ ಜಿಲ್ಲಾ ಸದಸ್ಯ ರಿಹಾನ್ ರಜಾ ಜೀ ಐನಾಪುರ ಪ್ರತಿ ತಿಂಗಳು ನಡೆಯುವ ಕುಂದುಕೊರತೆಗಳ ಸಭೆಯಲ್ಲಿ ಧ್ವನಿ ಎತ್ತಿದ್ದರು.
ಅಷ್ಟೇ ಅಲ್ಲದೇ ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ್ ಕೂಡಾ ಬೆಂಬಲಿಸಿದ್ದರು. ಇದೀಗ ಸರ್ಕಾರ ಧಾರವಾಡ ಜಿಲ್ಲೆಯಲ್ಲಿ ಬಸ್ಸುಗಳ ಕೊರತೆಯನ್ನು ಮನಗಂಡು, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರ ಬೇಡಿಕೆಯನ್ನು ಪರಿಗಣಿಸಿ 50 ಅತ್ಯುತ್ತಮ ಗುಣಮಟ್ಟದ ಬಸ್ಸುಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ನೀಡಿದೆ. ಈ ಮೂಲಕ ಜಿಲ್ಲೆಯ ಜನರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೆರವಾಗಿದ್ದಾರೆ.
ಇನ್ನು ಧಾರವಾಡ ಜಿಲ್ಲೆಗೆ ಬಸ್ಸುಗಳು ಅಗತ್ಯವಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಿ ಹೆಚ್ಚಿನ ಬಸ್ಸುಗಳನ್ನು ನೀಡಬೇಕೆಂದು ಧ್ವನಿ ಎತ್ತಿರುವ ರಿಹಾನ್ ರಜಾ ಜೀ ಐನಾಪುರ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Kshetra Samachara
20/11/2024 06:56 pm