ಹುಬ್ಬಳ್ಳಿ: ಸಾಕಷ್ಟು ಸಮಸ್ಯೆಗಳನ್ನು ಹೊತ್ತು ಸಾಗುತ್ತಿರುವ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜ್ವಲಂತ ಸಮಸ್ಯೆಗಳ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವಿಸ್ತೃತ ವರದಿ ಮಾಡಿದ ಬೆನ್ನಲ್ಲೇ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ಜನರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುವಂತಾಗಿದ್ದು, ಜನರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಜಿಲ್ಲಾಡಳಿತಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಹದಿನೈದು ದಿನಗಳ ಗಡುವು ನೀಡಿದ್ದು, ಯಾವುದೇ ರೀತಿಯಲ್ಲಿ ಸ್ಪಂದಿಸದೇ ಇದ್ದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಕಾಮಗಾರಿ ಮಾಡುವ ಮೂಲಕ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸುವುದಾಗಿ ಎಚ್ಚರಿಕೆ ನೀಡಿದರು.
ಈ ಕುರಿತು ಮಾತನಾಡಿದ ಅವರು, ಈಗಾಗಲೇ ನಾವು ಸಾಕಷ್ಟು ಬಾರಿ ಈ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡಿದ್ದೇವೆ. ವೃದ್ಧರು ಹಾಗೂ ವಿದ್ಯಾರ್ಥಿಗಳು, ಮಹಿಳೆಯರು ಕಷ್ಟಗಳನ್ನು ತೋಡಿಕೊಂಡಿದ್ದಾರೆ. ಹೀಗಿದ್ದರೂ ಕೂಡ ಇಲ್ಲಿನ ಜನಪ್ರತಿನಿಧಿಗಳು ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ. ಈಗ ನೀಡಿರುವ ಗಡುವು ಮೀರಿದರೇ ನಾವೇ ಟ್ರಾಕ್ಟರ್ ಮೂಲಕ ಮಣ್ಣನ್ನು ಹೊರಿಸಿ ಕಾಮಗಾರಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/07/2022 02:15 pm