ಧಾರವಾಡ: ನನ್ನ ಕಚೇರಿ ದುರ್ಬಳಕೆ ಮಾಡಿದವರ ಬಗ್ಗೆ ಈಗಾಗಲೇ ಮಾಹಿತಿ ಸಿಕ್ಕಿದ್ದು, ಈ ಸಂಬಂಧ ಈಗಾಗಲೇ ದೂರು ನೀಡಿದ್ದೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕಚೇರಿ ಹಾಗೂ ನನ್ನ ಹೆಸರಿನ ಮೇಲೆ ಊಟಿ ಮತ್ತು ಚೆನ್ನೈನಲ್ಲಿ ಕೆಲವರು ದುರ್ಬಳಕೆ ಮಾಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ಅಲ್ಲಿರುವ ಯಾರೋ ಒಬ್ಬ ವ್ಯಕ್ತಿ ಫೋನ್ ಮಾಡಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ತಕ್ಷಣ ಇದನ್ನು ಸಿಸಿಬಿಗೆ ವರ್ಗಾಯಿಸಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಬಂಧನ ಆಗಬೇಕು. ಅವರ ಫೋನ್ ನಂಬರ್ ಕೂಡ ನಾನು ಕೊಟ್ಟಿದ್ದೇನೆ. ಯಾರು, ಯಾವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಹಾಗೂ ಇದರ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಮಾಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.
Kshetra Samachara
19/06/2022 08:06 pm