ಧಾರವಾಡ: ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಇದಕ್ಕೆ ಧಾರವಾಡದಲ್ಲೂ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಹೋರಾಟದಲ್ಲಿ ಪಾಲ್ಗೊಳ್ಳಲು ಬಂದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರಿಗೆ ಹೋರಾಟಗಾರರು ತಾವು ಹೋರಾಟದಲ್ಲಿ ಪಾಲ್ಗೊಳ್ಳುವುದು ಬೇಡ ಸರ್ ಎಂದು ನಯವಾಗಿ ಅವರ ಬೆಂಬಲವನ್ನು ತಿರಸ್ಕರಿಸಿದ್ದಾರೆ.
ನಾವು ರಾಜಕೀಯ ಪಕ್ಷಗಳ ವಿರುದ್ಧವೂ ಹೋರಾಟ ಮಾಡುತ್ತಿದ್ದೇವೆ. ರಾಜಕೀಯ ವ್ಯಕ್ತಿಗಳು ಈ ಬಂದ್ ನಲ್ಲಿ ಪಾಲ್ಗೊಳ್ಳುವುದು ಬೇಡ ಎಂದು ರಾಜ್ಯಮಟ್ಟದಲ್ಲೇ ತೀರ್ಮಾನವಾಗಿದೆ. ಹೀಗಾಗಿ ತಾವು ಬೆಂಬಲ ನೀಡುವುದು ಬೇಡ ಸರ್ ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕೋನರಡ್ಡಿ, ನಿಮ್ಮ ಹೋರಾಟಕ್ಕೆ ಜಯವಾಗಲಿ. ನೀವು ಏನು ಮಾಡುತ್ತೀರೋ ಮಾಡಿ ಒಟ್ಟಿನಲ್ಲಿ ರೈತರಿಗೆ ಒಳ್ಳೆಯದಾದರೆ ಸಾಕು. ನಾನೂ ಕೂಡ ಒಬ್ಬರ ರೈತ ಹೋರಾಟಗಾರ. ಧಾರವಾಡ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತಪರ ಹೋರಾಟ ಮಾಡಿದ್ದೇನೆ. ರಾಜಕೀಯ ಪಕ್ಷಗಳ ಮೇಲೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಸಂಘಟನೆಯವರು ನೀವೂ ಬನ್ನಿ ಎಂದು ಕರೆದಿದ್ದರು. ಹೀಗಾಗಿ ನಾನು ಬಂದಿದ್ದೆ. ಈಗ ಬೇಡ ಎನ್ನುತ್ತಿದ್ದಾರೆ. ಅವರ ತೀರ್ಮಾನಕ್ಕೆ ತಲೆ ಬಾಗಲೇಬೇಕು ಎಂದರು.
Kshetra Samachara
28/09/2020 11:30 am