ಧಾರವಾಡ: ರಾಜ್ಯದಲ್ಲಿ ಕಾರ್ಮಿಕ ಇಲಾಖೆ ಕ್ರಾಂತಿಕಾರಿ ಬದಲಾವಣೆ ಮಾಡಲು ಮುಂದಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳು ಉನ್ನತ ಹುದ್ದೆಯಲ್ಲಿ ಬರಬೇಕು ಅವರು ಉನ್ನತ ಹುದ್ದೆಗಳಿಂದ ದೂರ ಇರಬಾರದು 1000 ಮಕ್ಕಳಿಗೆ ಕರ್ನಾಟಕ ಎಜ್ಯುಕೇಶನ್ ಬೋರ್ಡ್‌ನಿಂದ ಪರೀಕ್ಷೆ ಮಾಡಲಾಗುತ್ತಿದೆ.
ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸೆಲೆಕ್ಷನ್ ಮಾಡಲಾಗುತ್ತದೆ. ಐಎಎಸ್ ಕೋಚಿಂಗ್‌ಗೆ 250 ಹಾಗೂ ಕೆಎಎಸ್ ಕೋಚಿಂಗ್‌ಗೆ 500 ವಿದ್ಯಾರ್ಥಿಗಳನ್ನು ಸೆಲೆಕ್ಷನ್ ಮಾಡಲಾಗಿದೆ ಗುರುವಾರದಿಂದ ವಿದ್ಯಾರ್ಥಿಗಳಿಗೆ ಕೋಚಿಂಗ್ ಕೊಡಲು ಚಾಲನೆ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 10 ಪ್ರತಿಷ್ಠಿತ ತರಬೇತಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕೋಚಿಂಗ್ ಪಡೆಯಲಿದ್ದಾರೆ.
ವಿದ್ಯಾರ್ಥಿಗಳ ಶುಲ್ಕವನ್ನು ಕಾರ್ಮಿಕ ಇಲಾಖೆಯಿಂದ ಕೊಡಲಾಗುತ್ತದೆ ಜೊತೆಗೆ
ವಾರ್ಷಿಕ ವೇತನ ಕೊಡಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಬರಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಕಾರ್ಮಿಕ ಇಲಾಖೆಯಿಂದ ಇದೊಂದು ಒಳ್ಳೆಯ ಕೆಲಸವಾಗುತ್ತಿದೆ ಎಂದರು.
Kshetra Samachara
03/03/2022 07:33 pm