ಧಾರವಾಡ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೇಳುತ್ತಲೇ ಬಂದಿರುವ ಉಮೇಶ ಕತ್ತಿ ವಿರುದ್ಧ ರೈತ ಮುಖಂಡ ವೀರೇಶ ಸೊಬರದಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ ಕತ್ತಿ ಅವರೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಬರೀ ಹೇಳಿಕೆ ಕೊಡುವುದಲ್ಲ. ಈ ಭಾಗದ ರೈತರ ಸಮಸ್ಯೆಗಳಿಗೆ ನೀವು ಸ್ಪಂದಿಸಿದ್ದೀರಾ? ಈ ಭಾಗಕ್ಕೆ ಪ್ರಮುಖ ಇಲಾಖೆಗಳನ್ನು ತಂದು ಕೊಡುವಲ್ಲಿ ಶ್ರಮಿಸಿದ್ದೀರಾ? ನೀವು ಪತ್ರಿಕೆಗಳಲ್ಲಿ ಈ ರೀತಿಯ ಹೇಳಿಕೆ ನೀಡಿ ಪೇಪರ್ ಟೈಗರ್ ಆಗುವುದನ್ನು ಕೈಬಿಡಿ ಎಂದಿದ್ದಾರೆ.
ಇನ್ನು ರಾಜ್ಯದ 22 ಜಿಲ್ಲೆಗಳಿಗೆ ಪ್ರಮುಖ ಕಚೇರಿಯಾದ ಧಾರವಾಡದ ಕರ್ನಾಟಕ ನಿರಾವರಿ ನಿಗಮದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಕಚೇರಿಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರು ನಡೆಸುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಲಾಖೆಯಿಂದ ಸ್ಪಷ್ಟ ನಿರ್ದೇಶನ ಬರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/06/2022 03:46 pm