ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೇ.28ಕ್ಕೆ ಮೇಯರ್, ಉಪಮೇಯರ್ ಚುನಾವಣೆ: ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್...!

ಹುಬ್ಬಳ್ಳಿ: ಅಂತೂ ಇಂತೂ ಮೇಯರ್ ಚುನಾವಣೆಗೆ ಕಾಲ ಕೂಡಿ ಬಂದಿದೆ. ಇದೇ ತಿಂಗಳು 28ಕ್ಕೆ ಮೇಯರ್, ಉಪಮೇಯರ್ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಪಬ್ಲಿಕ್ ನೆಕ್ಸ್ಟ್ ವರದಿ ಬಿಗ್ ಇಂಪ್ಯಾಕ್ಟ್ ಆಗಿದೆ.

ಹೌದು...'ಪತ್ರ ವ್ಯವಹಾರ ಮುಗಿದಿದ್ದರೂ ಟೈಮ್ ಫಿಕ್ಸ್ ಆಗ್ತಿಲ್ಲ: ವರ್ಷ ಸಮೀಪಿಸಿದರೂ ಹರ್ಷವಿಲ್ಲ' ಎಂಬ ಶೀರ್ಷಿಕೆ ಅಡಿಯಲ್ಲಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸುವ ಮೂಲಕ ಬೆಳಗಾವಿ ಪ್ರಾದೇಶಿಕ ಆಯುಕ್ತರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದಿತ್ತು. ವರದಿಗೆ ಎಚ್ಚೆತ್ತುಕೊಂಡ ಆಯುಕ್ತರು ಹಾಗೂ ರಾಜ್ಯ ಸರ್ಕಾರ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ.

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. 21ನೇ ಅವಧಿಗೆ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಹಲವರು ಅದೃಷ್ಟವನ್ನು ಪರೀಕ್ಷಿಸಿಕೊಳ್ಳಲಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಚುನಾವಣೆ ನಡೆದು 9 ತಿಂಗಳ ಬಳಿಕ ಮೇಯರ್, ಉಪಮೇಯರ್ ಆಯ್ಕೆಗೆ ಕಾಲ ಕೂಡಿ ಬಂದಿದೆ.

Edited By :
Kshetra Samachara

Kshetra Samachara

11/05/2022 12:21 pm

Cinque Terre

57.53 K

Cinque Terre

1

ಸಂಬಂಧಿತ ಸುದ್ದಿ