ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಸವರಾಜ ಗುರಿಕಾರ ಅವರು ಬುಧವಾರ ಧಾರವಾಡದ ಅನೇಕ ಕಡೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಮಾಜಿ ಸಿಎಂ ಸಿದ್ದರಾಮಯ್ಯನವರೇ ಸ್ವತಃ ಧಾರವಾಡಕ್ಕೆ ಬಂದು ಗುರಿಕಾರ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಧಾರವಾಡದ ಜೆಎಸ್ಎಸ್ ಕಾಲೇಜಿನ ಉತ್ಸವ ಸಭಾಭವನ, ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಗುರಿಕಾರ ಅವರು, ಹೋದ ಕಡೆಗಳಲ್ಲೆಲ್ಲ ಉತ್ತಮ ಸ್ಪಂದನೆ ದೊರೆಯುತ್ತಿದೆ. ಶಿಕ್ಷಕರ ಮನಸ್ಸಿನಲ್ಲಿ ಪ್ರಸಕ್ತ ವರ್ಷ ಹೊರಟ್ಟಿ ಇಲ್ಲ ಎಂದರು.
ಧಾರವಾಡದಲ್ಲಿ ನಡೆದ ಪ್ರಚಾರ ಸಭೆ ಮುಗಿಸಿದ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲೆಯತ್ತ ಪ್ರಯಾಣ ಬೆಳೆಸಿದರು. ನಾಳೆ ಅಲ್ಲಿಯೂ ನಡೆಯಲಿರುವ ಸಮಾವೇಶದಲ್ಲಿ ಅವರು ಬಸವರಾಜ ಗುರಿಕಾರ ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ.
Kshetra Samachara
08/06/2022 07:50 pm