ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಮೊದಲ ಸಾಮಾನ್ಯ ಸಭೆಯಲ್ಲಿ ತ್ಯಾಜ್ಯ ವಿಲೇವಾರಿ ಕುರಿತ ವಿಷಯಕ್ಕೆ ಗಲಾಟೆ ನಡೆದಿದೆ.
ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ವಾದ- ವಿವಾದ ನಡೆದಿದ್ದು, ಕಸ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಚುನಾಯಿತ ಸದಸ್ಯರು ಹರಿಹಾಯ್ದಿದ್ದಾರೆ.
ಇನ್ನೂ ವಾರ್ಡ್ ವಾರು ಸಮರ್ಪಕ ತ್ಯಾಜ್ಯ ವಿಲೇವಾರಿಯಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ. ಚರ್ಚೆ ನಡುವೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿರುವ ಸದಸ್ಯರು, ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದಾರೆಂದು ಪಾಲಿಕೆ ಸದಸ್ಯ ಇಕ್ಬಾಲ್ ನವಲೂರ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
30/06/2022 02:00 pm