ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿಎಂ ಬೊಮ್ಮಾಯಿ ಮೇಲೆ ಭರವಸೆ ಇಟ್ಟು ಹೋರಾಟ ಮುಂದೂಡಲಾಗಿದೆ; ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದು, ಮೀಸಲಾತಿ ಸಿಗುವವರೆಗೆ ಹೋರಾಟ ನಡೆಸಲಾಗುವುದು. ಈಗಾಗಲೇ ಮುಖ್ಯಮಂತ್ರಿ ಅವರಿಂದ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಆಗಷ್ಟ್ 27ರವರೆಗೆ ಹೋರಾಟ ಮುಂದೂಡಲಾಗಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ನಗರದ ಗೋಕುಲ ರಸ್ತೆ ಖಾಸಗಿ ಹೋಟೆಲ್‌ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜ ಮುಖ್ಯಮಂತ್ರಿ ಅವರ ಮೇಲೆ ಭರವಸೆ ಇಟ್ಟಿದೆ. ಆದರೆ ಅವರು ಅದನ್ನು ಕಳೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮೀಸಲಾತಿ ನೀಡುವ ಕುರಿತು ಅವರು ತಮ್ಮ ನಿಲುವು ಏನೆಂಬುದನ್ನು ಕೂಡಲೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಲಾಗಿದೆ ಎಂದರು.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 4ನೇ ಬಾರಿಗೆ ಸರ್ಕಾರವು ಕೊಟ್ಟಿರುವ ಮಾತನಂತೆ ಮೀಸಲಾತಿ ಪಡೆಯುವ ನಿಟ್ಟಿನಲ್ಲಿ ಪಂಚ ಹಂತದ ಚಳುವಳಿಯ ಅಂಗವಾಗಿ ಧಾರವಾಡ ಜಿಲ್ಲೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನದ ಸತ್ಯಾಗ್ರಹ ಕೈಗೊಳ್ಳುವ ಸಲುವಾಗಿ ಪೂರ್ವ ಬಾವಿ ಸಭೆಯನ್ನು ಜು 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಸಲಾಗುವುದು. ಈಗಾಗಲೇ ಸಚಿವರಾದ ಸಿ.ಸಿ‌.ಪಾಟೀಲ್ ಹಾಗೂ ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ ಅವರ ಮೇಲೆ ನಂಬಿಕೆ ಇರಿಸಿ ಧರಣಿ ವಾಪಸ್ ಪಡೆಯಲಾಗಿದೆ ಎಂದರು.

ಇನ್ನು ಧಾರವಾಡ ಜಿಲ್ಲಾದ್ಯಂತ ಜುಲೈ ತಿಂಗಳಿನಲ್ಲಿ ಹೋರಾಟ ನಡೆಸಿ ಆಗಷ್ಟ್ ನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

Edited By :
Kshetra Samachara

Kshetra Samachara

30/06/2022 05:29 pm

Cinque Terre

23.44 K

Cinque Terre

0

ಸಂಬಂಧಿತ ಸುದ್ದಿ