ನವಲಗುಂದ : ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ 22.50 ಲಕ್ಷ ರೂ ವೆಚ್ಚದಲ್ಲಿ ಎಸ್.ಸಿ ಸಮಾಜದ ದುರ್ಗಾದೇವಿ ಮ್ಯಾಗೇರಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಸಮಾರಂಭದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭಾಗವಹಿಸಿ, ಕಾಮಗಾರಿಗೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಅಮರಗೋಳ ಗ್ರಾಮದಲ್ಲಿ 2.75 ಕೋಟಿ ರೂಗಳ ವೆಚ್ಚದಲ್ಲಿ ಆಯಕಟ್ಟು ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು, ಕಾರ್ಯಕರ್ತರು, ಗ್ರಾಮದ ಗುರುಹಿರಿಯರು, ಯುವಕರು ಉಪಸ್ಥಿತರಿದ್ದರು.
Kshetra Samachara
09/07/2022 08:19 pm