ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾರ್ವಜನಿಕರಿಗೆ ನೀರಿನ ತೊಂದರೆಯಾಗಬಾರದು ಎಂಜಿನಿಯರ್‌ಗೆ ಖಡಕ್ ಸೂಚನೆ ನೀಡಿದ ಮೇಯರ್

ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿ ನಗರಗಳಿಗೆ ಕುಡಿಯುವ ನೀರು ಸರಬರಾಜು ಅಭಿವೃದ್ಧಿ ಯೋಜನೆಯಡಿಯಲ್ಲಿ ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ನಿರ್ಮಿಸಲಾಗಿರುವ ಜಲಶುದ್ಧೀಕರಣ ಹಾಗೂ ಸರಬರಾಜು ಘಟಕಕ್ಕೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಹಾಗೂ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ಅವರು ಭೇಟಿ ನೀಡಿ ಪರಿಶೀಲಿಸಿ, ಎಂಜಿನಿಯರ್ ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದರು.

ಕಳೆದ ಕೆಲ ದಿನಗಳಿಂದ ಅವಳಿ ನಗರಗಳಲ್ಲಿ ಹಾಗೂ ಸುತ್ತಲಿನ ಅಭಿವೃದ್ಧಿ ಹೊಂದುತ್ತಿರುವ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಇಂದು ಅಮ್ಮಿನಬಾವಿ ಘಟಕಕ್ಕೆ ಮೇಯರ್ ಹಾಗೂ ಆಯುಕ್ತರು ಭೇಟಿ ನೀಡಿದರು.

ನೀರು ಸರಬರಾಜು ಘಟಕವನ್ನು ಎಲ್ ಆ್ಯಂಡ್ ಟಿ ಸಂಸ್ಥೆಗೆ ಹಸ್ತಾಂತರಿಸಿದ್ದು, 2030ರವರೆಗೆ ಗುತ್ತಿಗೆ ಪಡೆದಿದೆ. ಆದರೆ, ಇತ್ತೀಚಿನ ಕೆಲ ದಿನಗಳಿಂದ ಹುಬ್ಬಳ್ಳಿ, ಧಾರವಾಡ ಟ್ಯಾಂಕ್‍ಗಳಿಗೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಅಲ್ಲದೇ ಕೆಲವೆಡೆ ನೀರು ಪೋಲಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ. 40 ಎಂಎಲ್‍ಡಿ ಘಟಕಗಳು ಸ್ಥಾಪನೆಯಾದಾಗ ಕನಿಷ್ಠ ನಾಲ್ಕು ದಿನಗಳಿಗೊಮ್ಮೆಯಾದರೂ ನೀರು ಸರಬರಾಜು ಆಗುತ್ತಿತ್ತು. ಆದರೆ 80 ಎಂಎಲ್‍ಡಿ ಘಟಕ ಸ್ಥಾಪನೆಯಾಗಿ 25 ವಾರ್ಡ್‌ಗಳಿಗೆ 24x7 ನೀರು ಸರಬರಾಜು ಆಗಬೇಕಿತ್ತು. ಆದರೆ ಆ ರೀತಿ ಆಗುತ್ತಿಲ್ಲ. ಹೀಗಾಗಿ ಒಟ್ಟಾರೆ ಸರಬರಾಜು ವ್ಯವಸ್ಥೆಯ ಸಂಪೂರ್ಣ ನಿರ್ವಹಣೆ ಜವಾಬ್ದಾರಿಯನ್ನು ಎಲ್ ಆ್ಯಂಡ್ ಟಿ ಸಂಸ್ಥೆ ವಹಿಸಿಕೊಳ್ಳಬೇಕಾಗುತ್ತದೆ. ತಕ್ಷಣವೇ ಸಮಸ್ಯೆಯನ್ನು ಪರಿಹರಿಸಬೇಕೆಂದು ಎಂಜಿನಿಯರ್‌ಗಳಿಗೆ ಮೇಯರ್ ಅಂಚಟಗೇರಿ ಸೂಚಿಸಿದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಗೋಪಾಕೃಷ್ಣ ಬಿ ಮಾತನಾಡಿ, ಹಳೇ ಹುಬ್ಬಳ್ಳಿಯಲ್ಲಿ 82 ವಾರ್ಡ್‌ಗಳಲ್ಲಿ 220 ಎಂಎಲ್‍ಡಿ ನೀರು ಸರಬರಾಜು ಆಗುತ್ತಿದೆ. 11 ವಾರ್ಡ್‌ಗಳಲ್ಲಿ 24x7 ನಿರಂತರ ನೀರು ಸರಬರಾಜು ಆಗುತ್ತಿದೆ. 25 ವಾರ್ಡ್‌ಗಳಲ್ಲಿ ಪ್ರತಿನಿತ್ಯ ನಾಲ್ಕು ಐದು ಗಂಟೆ ನೀರು ಸರಬರಾಜು ಆಗುತ್ತಿದೆ. ಉಳಿದ 46 ವಾರ್ಡ್‍ಗಳಲ್ಲಿ ನೀರು ದೊರೆಯುವಂತೆ ಎಚ್ಚರ ವಹಿಸಲಾಗಿದೆ ಎಂದರು.

Edited By : Nagaraj Tulugeri
Kshetra Samachara

Kshetra Samachara

27/09/2022 09:52 pm

Cinque Terre

25.46 K

Cinque Terre

0

ಸಂಬಂಧಿತ ಸುದ್ದಿ