ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೂರನೇ ದ್ವಾರ ಲೋಕಾರ್ಪಣೆ: ನಿಜಾಮುದ್ದೀನ್ ರೈಲಿಗೆ ಗ್ರೀನ್ ಸಿಗ್ನಲ್

ಹುಬ್ಬಳ್ಳಿ: ಭಾರತೀಯ ರೈಲ್ವೆಯು ಸಾಕಷ್ಟು ಜನಮನ್ನಣೆ ಪಡೆದ ಬೆನ್ನಲ್ಲೇ ಈಗ ನೈಋತ್ಯ ರೈಲ್ವೆ ಹಲವಾರು ಯೋಜನೆ ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ವಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೂರನೇ ಮುಖ್ಯ ದ್ವಾರವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಚಾಲನೆ ನೀಡುವ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು.

ಮುಖ್ಯ ರೈಲ್ವೆ ನಿಲ್ದಾಣದ ಜನದಟ್ಟಣೆಯನ್ನು ತಗ್ಗಿಸುವ ಸದುದ್ದೇಶದಿಂದ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಮುಖ್ಯ ದ್ವಾರ ಲೋಕಾರ್ಪಣೆ ಮಾಡಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್ ಸೇರಿದಂತೆ ಇತರರು ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಸಚಿವರು, ಮುಖ್ಯ ದ್ವಾರ ಲೋಕಾರ್ಪಣೆ ಹಾಗೂ ಹುಬ್ಬಳ್ಳಿ ಹಜರತ್ ನಿಜಾಮುದ್ದೀನ್ ಸಾಪ್ತಾಹಿಕ ರೈಲು ಆರಂಭಕ್ಕೆ ಚಾಲನೆ ನೀಡಲಾಯಿತು. ಒಟ್ಟಿನಲ್ಲಿ ಬಹು ದಿನಗಳ ಕನಸು ನನಸಾಗಿದ್ದು, ಈಗ ಮೂರನೇ ದ್ವಾರ ವಿದ್ಯುಕ್ತವಾಗಿ ಆರಂಭಗೊಂಡಿತು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/10/2022 07:58 pm

Cinque Terre

77.1 K

Cinque Terre

1

ಸಂಬಂಧಿತ ಸುದ್ದಿ