ಹುಬ್ಬಳ್ಳಿ: ಬಿಜೆಪಿ ನೇತೃತ್ವದ ರಾಜ್ಯ ಹಾಗೂ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಆಜ್ಞೆಯನ್ನು ದಿಕ್ಕರಿಸಿದೆ ಎಂದು ಆರೋಪಿಸಿ ಮಾಜಿ ಸಿಎಂ ಜಗದೀಶ ಶೆಟ್ಟರ ಮನೆ ಮುಂದೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಭಟನೆ ನಡೆಸಿದರು.
ಘೋಷಣೆ ಕೂಗುವ ಮೂಲಕ ಕಾರ್ಯಕರ್ತರ ಜೊತೆಗೆ ಆಗಮಿಸಿದ ಶ್ರೀರಾಮಸೇನೆ ಸಂಸ್ಥಾಪನಾಧ್ಯಕ್ಷ ಪ್ರಮೋದ ಮುತಾಲಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹತ್ತಾರು ಕಾರ್ಯಕರ್ತರೊಂದಿಗೆ ಸೇರಿ ಹುಬ್ಬಳ್ಳಿಯ ಮಧುರಾ ಕಾಲೋನಿಯಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ನಿವಾಸಕ್ಕೆ ಆಗಮಿಸಿದ ಪ್ರತಿಭಟನಾಕಾರರು ಶೆಟ್ಟರ ನಿವಾಸದ ಎದುರು ಕುಳಿತು ಪ್ರತಿಭಟನೆ ನಡೆಸಿದರು.
ಸುಪ್ರೀಂ ಕೋರ್ಟ್ ಆಜ್ಞೆಯನ್ನ ದಿಕ್ಕರಿಸುತ್ತಿರುವ ಸರ್ಕಾರ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅನಧಿಕೃತ ಲೌಡ್‌ಸ್ಪೀಕರ್ ತೆರವಿಗೆ 15 ದಿನಗಳ ಗಡುವು ನೀಡಿದ್ದರು. ಅನಧಿಕೃತ ಮೈಕ್ ತೆರವುಗಿಳಿಸದ ಹಿನ್ನೆಲೆ ಶೆಟ್ಟರ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/06/2022 12:59 pm