ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರ್ಕಾರಿ ಅಧಿಕಾರಿಗಳಿಗೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರಿಂದ ಕಿರುಕುಳ.!

ಪಬ್ಲಿಕ್ ನೆಕ್ಸ್ಟ್ ವರದಿ- ಈರಣ್ಣ ವಾಲಿಕಾರ

ಹುಬ್ಬಳ್ಳಿ: ಅವರೆಲ್ಲರು ತಾವಾಯಿತು ತಮ್ಮ ಕೆಲಸವಾಯಿತು ಎಂದು ಕರ್ತವ್ಯ ನಿರ್ವಹಿಸುಕೊಂಡು ಹೋಗ್ತಾ ಇದ್ರು. ಅದೇನು ಆಯ್ತು ಗೊತ್ತಿಲ್ಲ, ಪಕ್ಷದ ಕಾರ್ಯಕರ್ತರೆಂದು ಹೇಳಿಕೊಂಡು ಸರ್ಕಾರಿ ಕಚೇರಿಗೆ ನುಗ್ಗಿ, ಇಲ್ಲಸಲ್ಲದ ದಾಖಲೆಗಳನ್ನು ಕೇಳಿ ಕಿರುಕುಳ ನೀಡಿದ್ದಾರೆ. ಅಷ್ಟಕ್ಕೂ ಅಲ್ಲಿ ಏನಾಗಿದೆ. ಅದು ಯಾವ ಪಕ್ಷ ಅಂತ ಈ ಸ್ಟೋರಿ.

ಹೌದು. ಹೀಗೆ ತಮ್ಮ ಕೆಲಸ ಬಿಟ್ಟು ಪ್ರತಿಭಟನೆ ಮಾಡುತ್ತಿರುವ ನೂರಾರು ಸರ್ಕಾರಿ ನೌಕರರು, ಇನ್ನೊಂದಡೆ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ಕೊಡುತ್ತಿರುವ ಪೊಲೀಸರು. ಇಷ್ಟೆಲ್ಲ ದೃಶ್ಯಗಳಿಗೆ ಸಾಕ್ಷಿಯಾಗಿದ್ದು ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ. ಇಂದು ಮುಂಜಾನೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರೆಂದು ಒಳಗೆ ನುಗ್ಗಿದ ಸುಮಾರು 10ಕ್ಕೂ ಅಧಿಕ ಜನರು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಐಡಿ ಕಾರ್ಡ್ ತೋರಿಸಿ, ನೀವು ಏನು ಕೆಲಸ ಮಾಡುತ್ತಿರೆಂಬುದನ್ನು ನಮಗೆ ಮಾಹಿತಿ ನೀಡೆಂದು ಸತತವಾಗಿ ಕಿರುಕುಳ ನೀಡಿದ್ದಾರೆ. ಇನ್ನು ಸ್ವತಃ ತಾವೆ ಟೇಬಲ್ ಮೇಲಿದ್ದ ದಾಖಲೆಗಳನ್ನು ಅನುಮತಿ ಇಲ್ಲದೆ ಪರಿಶೀಲನೆ ಮಾಡಲು ಮುಂದಾಗಿದ್ದಾರಂತೆ. ಇನ್ನು ಇವರ ಕಿರುಕುಳ ಬೇಸತ್ತ ಅಧಿಕಾರಿಗಳು ಪ್ರತಿಭಟನೆಗಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಉಪನಗರ ಠಾಣೆಯ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿ ಠಾಣೆಗೆ ಕರೆ ತಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸರಿಗೂ ಯಾವುದೇ ಮಾಹಿತಿ ನೀಡದೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರೆಂದು ಹೇಳಿಕೊಂಡು ಬಂದು, ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ತರುವುದು ಎಷ್ಟರ ಮಟ್ಟಿಗೆ ಸರಿ? ಕೆಆರ್‌ಎಸ್ ಪಕ್ಷದ ಸಂಸ್ಥಾಪಕ ರವಿಕೃಷ್ಣ ರೆಡ್ಡಿ ಅವರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ನಿಮ್ಮ ಕಾರ್ಯಕರ್ತರಿಗೆ ಬುದ್ಧಿ ಹೇಳುವ ಕೆಲಸ ಮಾಡಿ. ಹಿಂಗಾದರೆ ಸಾರ್ವಜನಿಕರು ನಂಬುವುದು ಹೇಗೆ?

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2022 05:18 pm

Cinque Terre

70.23 K

Cinque Terre

0

ಸಂಬಂಧಿತ ಸುದ್ದಿ