ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿದೆ. ಅಷ್ಟೇ ರೀತಿಯಲ್ಲಿ ತೊಂದರೆಗಳು ಎದುರಾಗುತ್ತಿವೆ. ಒಂದು ಚಿಕ್ಕ ಮಳೆ ಬಂದ್ರೆ ಸಾಕು ಚರಂಡಿ ಬ್ಲಾಕ್ ಆಗಿ ಮನೆ ಒಳಗೆ ನೀರು ನುಗ್ಗುತ್ತಿವೆ. ಇದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ.
ಮಳೆಗಾಲ ಆರಂಭವಾಗಿದ್ದರಿಂದ ಸರಿಯಾದ ನಿರ್ವಹಣೆ ಇಲ್ಲದೆ ಚರಂಡಿ ಬ್ಲಾಕ್ ಆಗಿ ಮಳೆ ನೀರು, ಚರಂಡಿ ನೀರು ರಸ್ತೆ ಮೇಲೆ ಮನೆ ಒಳಗೆ ನುಗ್ಗುತ್ತಿದೆ. ಇದರಿಂದ ಬೇಸತ್ತು ಜನ ಮಹಾನಗರ ಪಾಲಿಕೆಗೆ ಕಂಟ್ರೋಲ್ ರೂಮ್ಗೆ ಕರೆ ಮಾಡಿದರೆ ಯಾರು ಕೂಡ ಕ್ಯಾರೆ ಎನ್ನುತ್ತಿಲ್ಲ ಅನ್ನೋದು ಜನರ ನೇರ ಆರೋಪ. ಅಷ್ಟೇ ಅಲ್ಲದೆ ನಗರಗಳಲ್ಲಿ ದಿನ ಬೆಳಗಾದರೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸ ಸಂಗ್ರಹಿಸಲು ಕಸದ ವಾಹನಗಳನ್ನು ಮತ್ತು ಪೌರ ಕಾರ್ಮಿಕರನ್ನು ನಿಯೋಜಿಸಿದೆ. ಆದ್ರೆ ಕಸ ಸಂಗ್ರಹ ಮಾಡಲು ಇವರು ಕೆಲವೊಂದು ಏರಿಯಾಗಳಲ್ಲಿ ಬರುವುದಿಲ್ಲವೆಂದು ಜನರು ಕಂಟ್ರೋಲ್ ರೂಮ್ಗೆ ಕರೆ ಮಾಡಿದರೆ ಯಾರು ಕೂಡ ಕರೆ ಸ್ವೀಕರಿಸುತ್ತಿಲ್ಲವಂತೆ. ಈ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರನ್ನು ಕೇಳಿದರೆ ಏನು ಹೇಳುತ್ತಾರೆ ಎಂಬುದನ್ನು ನೀವೆ ಕೇಳಿ.
ಒಟ್ನಲ್ಲಿ ಮಳೆ ಯಾಗುತ್ತಿರುವುದರಿಂದ ಕೆಲವೊಂದು ಪ್ರದೇಶಗಳಲ್ಲಿ ಜನರು ಪರದಾಡುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರವಿಲ್ಲವೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ಈ ಎಲ್ಲ ಸಮಸ್ಯೆಗಳಿಗೆ ಬ್ರೇಕ್ ಹಾಕುವಂತಹ ಕೆಲಸ ಮಾಡಬೇಕಿದೆ.
ಐಕಾನ್- ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
Kshetra Samachara
09/09/2022 12:34 pm