ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಳಪೆ ಗುಣಮಟ್ಟದ ನವಲೂರು ಬ್ರಿಜ್‌: ತನಿಖೆಗೆ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶ

ಧಾರವಾಡ: ಧಾರವಾಡದ ನವಲೂರು ಬಳಿ ಬಿಆರ್‌ಟಿಎಸ್ ಯೋಜನೆಯಡಿ ನಿರ್ಮಿಸಲಾಗಿರುವ ಸೇತುವೆ ಕಾಮಗಾರಿ ಕಳಪೆಯಾಗಿದ್ದು, ಅದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಗುತ್ತಿಗೆದಾರ ಹಾಗೂ ಭ್ರಷ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ ಬಣದ ರಾಜ್ಯ ಅಧ್ಯಕ್ಷ ನಾಗರಾಜ ಕರೆಣ್ಣವರ ಅವರು ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ನವಲೂರು ಬ್ರಿಜ್ ಕಾಮಗಾರಿ ಕುರಿತು ತನಿಖೆ ಆರಂಭವಾಗಿದೆ.

ನಾಗರಾಜ ಕರೆಣ್ಣವರ ಅವರು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ 2020 ರಲ್ಲಿ ಸೇತುವೆ ಸಂಬಂಧ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಸೇತುವೆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ತನಿಖಾ ಸಮಿತಿಯೊಂದನ್ನು ರಚಿಸಿದ್ದಾರೆ. ತನಿಖಾಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ರವಿಶಂಕರ ಅವರನ್ನು ನೇಮಿಸಲಾಗಿದೆ. ಇಂದು ಆರ್.ರವಿಶಂಕರ ಅವರು ನವಲೂರು ಸೇತುವೆ ಪರಿಶೀಲಿಸಿದ್ದಾರೆ. ಈ ವೇಳೆ ದೂರು ಸಲ್ಲಿಸಿದ್ದ ನಾಗರಾಜ ಕರೆಣ್ಣವರ ಸಹ ತನಿಖಾಧಿಕಾರಿಗಳ ಜೊತೆಗಿದ್ದು, ಕಾಮಗಾರಿ ಬಗ್ಗೆ ವಿವರಣೆ ನೀಡಿದ್ದಾರೆ.

ನವಲೂರು ಸೇತುವೆ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ ಆ ಬಗ್ಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ತನಿಖಾಧಿಕಾರಿಗೆ ಸೂಚನೆ ನೀಡಿದ್ದಾರೆ. ನ್ಯಾಯಮೂರ್ತಿಗಳ ಆದೇಶದಂತೆ ಇದೀಗ ಬಿಆರ್‌ಟಿಎಸ್ ಯೋಜನೆಯಡಿ ನಿರ್ಮಾಣವಾಗಿರುವ ಈ ನವಲೂರು ಸೇತುವೆ ಸಂಬಂಧ ತನಿಖೆ ಆರಂಭವಾಗಿದ್ದು, ಸೂಕ್ತ ತನಿಖೆ ನಡೆದು ಕಾಮಗಾರಿಯಲ್ಲಿ ಲೋಪವೆಸಗಿರುವುದು ಸಾಬೀತಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Edited By : Nagesh Gaonkar
Kshetra Samachara

Kshetra Samachara

13/12/2021 07:03 pm

Cinque Terre

48.84 K

Cinque Terre

10

ಸಂಬಂಧಿತ ಸುದ್ದಿ