ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹೊಲ್ತಿಕೋಟೆ ಕೆರೆಗೆ ಸಚಿವ ಮುನೇನಕೊಪ್ಪ ಭೇಟಿ

ಧಾರವಾಡ: ನಿನ್ನೆ ಹಾಗೂ ಮೊನ್ನೆ ಸುರಿದ ಧಾರಾಕಾರ ಮಳೆಗೆ ಧಾರವಾಡ ತಾಲೂಕಿನ ಹೊಲ್ತಿಕೋಟೆ ಗ್ರಾಮದ ದೊಡ್ಡ ಕರೆ ತುಂಬಿ ಕೋಡಿ ಬಿದ್ದಿದ್ದು, ದೊಡ್ಡ ಪ್ರಮಾಣದಲ್ಲಿ ರೈತರ ಬೆಳೆಗಳಿಗೆ ನಷ್ಟವುಂಟಾಗಿದೆ. ಅಲ್ಲದೇ ಕೆರೆ ಕಟ್ಟೆ ಒಡೆದಿದ್ದು, ಆ ಭಾಗದ ಜೀವನಾಡಿಯಾಗಿರುವ ಈ ಕೆರೆಯ ನೀರು ಖಾಲಿಯಾಗುತ್ತಿದ್ದು, ಸ್ಥಳಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಅಧಿಕಾರಿಗಳ ಸಮೇತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂಬರುವ ಎರಡ್ಮೂರು ದಿನಗಳಲ್ಲಿ ಈ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ರೈತರು ಜೀವ ರಕ್ಷಣೆಗೆ ಎಚ್ಚರಿಕೆ ವಹಿಸಬೇಕು. ಸುಮಾರು 110 ಮಿಲಿ ಮೀಟರ್ ಪ್ರಮಾಣದ ಮಳೆಯಾದ ಪರಿಣಾಮವಾಗಿ, ಹೊಲ್ತಿಕೋಟಿ ಕೆರೆಗೆ ಒಳಹರಿವು ಹೆಚ್ಚಾದ ಪರಿಣಾಮ, ಕೆರೆಯ ತಡೆಗೋಡೆ ಒಡೆದಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಮೀಕ್ಷೆ ಮಾಡಲು ಸೂಚಿಸಲಾಗಿದೆ. ಬೆಳೆ ಹಾಗೂ ಮನೆಗಳ ಹಾನಿಗೊಳಗಾದವರಿಗೆ ಸಮೀಕ್ಷೆ ವರದಿ ಆಧರಿಸಿ ಪರಿಹಾರ ಒದಗಿಸಲಾಗುವುದು ಎಂದರು.

ಹೊಲ್ತಿಕೋಟೆ ಕೆರೆಯು 30 ವರ್ಷಗಳ ಹಿಂದೆ ಒಂದು ಬಾರಿ ಒಡೆದಿತ್ತು ಎಂಬುದನ್ನು ಸ್ಥಳೀಯ ರೈತರು ಹೇಳಿದ್ದಾರೆ. ಕೆರೆಯ ಶಾಶ್ವತ ದುರಸ್ತಿಗೆ ಕ್ರಮ ವಹಿಸಲಾಗುವುದು. ಹೊಲ್ತಿಕೋಟೆ ಟೆನೆಂಟ್ ಫಾರ್ಮಿಂಗ್ ಸೊಸೈಟಿಯ ಹೆಸರಿನ ಮಾಲೀಕತ್ವದಲ್ಲಿರುವ ಸುಮಾರು 220 ಎಕರೆ ಭೂಮಿಯನ್ನು ರೈತರ ಹೆಸರಿಗೆ ವರ್ಗಾಯಿಸಲು ಸ್ಥಳೀಯರ ಬೇಡಿಕೆ ಇದೆ. ಅಗತ್ಯ ದಾಖಲೆಗಳನ್ನು ಪಡೆದು ವರ್ಗಾಯಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರದ ಮಟ್ಟದಲ್ಲಿಯೂ ನೆರವು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

18/11/2021 09:50 pm

Cinque Terre

46.3 K

Cinque Terre

1

ಸಂಬಂಧಿತ ಸುದ್ದಿ