ಹುಬ್ಬಳ್ಳಿ: ಅಂತೂ ಇಂತೂ ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಚೆತ್ತುಕೊಂಡ ಜಿಲ್ಲಾ ಉಸ್ತುವಾರಿ ಸಚಿವರು ಧಾರವಾಡ ಜಿಲ್ಲೆಗೆ ಆಗಮಿಸಿದ್ದಾರೆ. ನಿನ್ನೆಯಷ್ಟೇ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂಬ ಸುದ್ದಿ ಪ್ರಸಾರಗೊಂಡಿದ್ದೇ ತಡ, ಜಿಲ್ಲಾ ಉಸ್ತುವಾರಿ ಸಚಿವರು ಧಾರವಾಡ ಜಿಲ್ಲೆಗೆ ಭೇಟಿ ನೀಡಿದ್ದಾರೆ.
ಸುಮಾರು ಸಮಸ್ಯೆಗಳು ಉಂಟಾಗಿದ್ದು, ಸರ್ಕಾರದ ಮುಖ್ಯಮಂತ್ರಿ ಆದೇಶ ನೀಡಿದ್ದರೂ ಈ ಕಡೆಗೆ ನೋಡದೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವರು ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಹುಬ್ಬಳ್ಳಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಣೆಯಾಗಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಸಾರಗೊಂಡಿತ್ತು. ಈ ವರದಿಯನ್ನು ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಪ್ರವಾಸವನ್ನು ನಿರ್ಧರಿಸಿ ಧಾರವಾಡ ಜಿಲ್ಲೆಗೆ ದೌಡಾಯಿಸಿದ್ದಾರೆ. ಒಟ್ಟಿನಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿಗೆ ಸ್ಪಂದಿಸಿ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನರ ಸಮಸ್ಯೆಗಳಿಗೂ ಸೂಕ್ತ ಸ್ಪಂದನೆ ನೀಡಬೇಕಿದೆ.
Kshetra Samachara
13/07/2022 01:21 pm