ರಸ್ತೆ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ ಘಟನೆ ಕೇಶ್ವಾಪುರದ ಶಾಂತಿ ನಗರ ಸರ್ಕಲ್ ಬಳಿ ನಡೆದಿದೆ.
ನಿರಂತರ ಮಳೆಯಿಂದ ಅವಳಿನಗರದ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ನೂರಾರು ವಾಹನ ಸವಾರರು ಹಾಗೂ ಪಾದಚಾರಿಗಳು ನಡೆದಾಡಲು ಆಗದ ಸ್ಥಿತಿಯಲ್ಲಿ ರಸ್ತೆಗಳಿವೆ. ಹೀಗಾಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ಗುಂಡಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಶಾಂತಿನಗರ ಕ್ರಾಸ್ ಬಳಿ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಜಗದೀಶ್ ಶೆಟ್ಟರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಿರಂತರ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿದ್ದು, ಮಾಜಿ ಸಿ ಎಂ ಹಾಗೂ ಹಾಲಿ ಶಾಸಕರಾದ ಜಗದೀಶ್ ಶೆಟ್ಟರ್ ಮನೆ ಹಿಂಭಾಗದಲ್ಲಿಯೇ ಇಂತ ಅವ್ಯವಸ್ಥೆ ಇದೆ. ಹೀಗಾಗಿ ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿದರು.
Kshetra Samachara
21/07/2022 12:36 pm