ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿಯವರು ಮೀಸಲಾತಿ ನೀಡಿದರೆ 101 ಲೀಟರ್ ಹಾಲಿನ ಅಭಿಷೇಕ ಮಾಡುತ್ತೇವೆ. ಸೂರ್ಯ ಚಂದ್ರ ಇರುವವರೆಗೆ ಹೇಗೆ ಚೆನ್ನಮ್ಮನ ಸ್ಮರಣೆ ಮಾಡ್ತೀವೋ ಹಾಗೆ ನಿಮ್ಮ ಸ್ಮರಣೆ ಮಾಡುತ್ತೇವೆ. ಸವಣೂರು ಖಾರಾ ತುಲಾಭಾರ ಮಾಡಿಸುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮಿಜಿ ಹೇಳಿದರು.
ಸಿಎಂ ನಿವಾಸದ ಎದುರು ಧರಣಿ ವೇಳೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದಂತೆ ಯಡಿಯೂರಪ್ಪ ಸಾಹೇಬ್ರು ಒತ್ತಡ ಹಾಕ್ತಿದ್ದಾರೆ ಅಂತ ಕೆಲವರು ನಮಗೆ ಹೇಳಿದ್ದಾರೆ. ಬೊಮ್ಮಾಯಿ ಮೀಸಲಾತಿ ನೀಡಿದರೆ ಎಲ್ಲಿ ಲಿಂಗಾಯತ ಲೀಡರ್ ಆಗುತ್ತಾರೋ ಅಂತ ಯಡಿಯೂರಪ್ಪನಿಗೆ ಹೊಟ್ಟೆಕಿಚ್ಚು ಇರಬಹುದು. ಹೋರಾಟಕ್ಕೆ ನೀವೆನಾದರೂ ತೊಂದರೆ ಮಾಡಿದರೆ ನೀವು ಹೋದಲ್ಲೆಲ್ಲಾ ಕಪ್ಪು ಬಾವುಟ ಹಾರಿಸುತ್ತೇವೆ. ಶಿಕಾರಿಪುರದವರೆಗೆ ಪಾದಯಾತ್ರೆ ಮಾಡುವುದಕ್ಕೆ ಸಿದ್ದರಿದ್ದೇವೆ ಎಂದು ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದರು.
ವಿಜಯೇಂದ್ರ ಸಣ್ಣ ಹುಡುಗ, ಮೊದಲು ನಮ್ಮ ಮೀಸಲಾತಿ ಹೋರಾಟಕ್ಕೆ ತೊಂದರೆ ನೀಡಿದ್ದಾರೆ.ಆ ಮೇಲೆ ತಪ್ಪಿನ ಅರಿವಾಗಿ ಸುಮ್ಮನೆ ಕುಳಿತರು ಎಂದು ವಿಜಯೇಂದ್ರ ವಿರುದ್ಧ ವ್ಯಂಗ್ಯವಾಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/09/2022 07:13 pm