ನವಲಗುಂದ : “ಜಲ ಜೀವನ್ ಮಿಷನ್” ಯೋಜನ ಅಡಿಯಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಂದ ಸುಮಾರು 76 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ನವಲಗುಂದ ತಾಲೂಕಿನ ಕದಡಳ್ಳಿ ಗ್ರಾಮದಲ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಕಡದಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಹಾಗೂ ಶಿಶು ಅಂಗನವಾಡಿ ಕೊಠಡಿಗಳನ್ನು ಉದ್ಘಾಟಿಸಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಸ್ವೀಕರಿಸಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ಎಸ್.ಬಿ.ದಾನಪ್ಪಗೌಡರ್, ಬಿಜೆಪಿ ಮುಖಂಡರಾದ ಸಿದ್ದಣ್ಣ ಕಿಟಗೇರಿ ಸೇರಿದಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಕಿಯಾ ಬೇಗಂ ಕಮಲಶಾನವರ, ಉಪಾಧ್ಯಕ್ಷರಾದ ಮಲ್ಲಪ್ಪ ಹೊಳೆನ್ನವರ, ಸದಸ್ಯರುಗಳಾದ ನಾಗನಗೌಡ ನ ಮರಿಗೌಡ್ರ, ಗಿರಿಜವ್ವ ಮಾದರ, ಮತ್ತು ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
13/04/2022 12:03 pm