ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದೇಶಪಾಂಡೆ ನಗರ ರೇಲ್ವೆ ಕೆಳಸೇತುವೆ ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನಗರದ ದೇಶಪಾಂಡೆ ನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸಲು ಕೃಷ್ಣಮಂದಿರ ಬಳಿ ನಿರ್ಮಿಸಲಾಗುತ್ತಿರುವ ರೇಲ್ವೆ ಕೆಳಸೇತುವೆ ಕಾಮಗಾರಿಯನ್ನು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಪರಿಶೀಲಿಸಿದರು.

ನಂತರ ಮಾಧ್ಯಮ ಜೊತೆ ಮಾತನಾಡಿ ಅವರು, ಈ ಭಾಗದ ಹಲವು ಪ್ರದೇಶಗಳ ನಾಗರಿಕರ ಬಹುದಿನಗಳ ಬೇಡಿಕೆಯನುಸಾರವಾಗಿ ಸ್ಥಳೀಯ ಸಂಸದರೂ ಆಗಿರುವ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಈ ಹಿಂದೆ ಕೇಂದ್ರದ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿಯವರ ತ್ವರಿತ ಸ್ಪಂದನೆಯಿಂದ ದೇಶಪಾಂಡೆ ನಗರದಲ್ಲಿ ರೇಲ್ವೆ ಕೆಳಸೇತುವೆ ಕಾಮಗಾರಿ ಹಾಗೂ ಉಣಕಲ್ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

Edited By : Nagaraj Tulugeri
Kshetra Samachara

Kshetra Samachara

02/01/2021 01:21 pm

Cinque Terre

38.32 K

Cinque Terre

1

ಸಂಬಂಧಿತ ಸುದ್ದಿ