ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಹೃದಯ ಭಾಗವಾದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಬಹುನಿರೀಕ್ಷಿತ ಫ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಜ. 15ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ನಗರದ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಮೊದಲ ಪ್ಲಾಟ್‌ಫಾರ್ಮ್‌ನಲ್ಲಿ ಐಆರ್‌ಸಿಟಿಸಿ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು,300 ಕೋಟಿ ಮೊತ್ತದ ಕಾಮಗಾರಿ ಇದಾಗಿದ್ದು, ಗಬ್ಬೂರು ಕ್ರಾಸ್‌ವರೆಗೆ ವಿಸ್ತರಣೆ ಮಾಡಬೇಕು ಎನ್ನುವ ಆಸೆ ನನ್ನದು. ಇದಕ್ಕೆ ಅಂದಾಜು 100 ಕೋಟಿ ಹೆಚ್ಚುವರಿಯಾಗಿ ಖರ್ಚಾಗಲಿದ್ದು, ಮಹಾನಗರ ಪಾಲಿಕೆ, ಹುಡಾ ಮತ್ತು ಸ್ಥಳೀಯ ಸಂಸ್ಥೆಗಳಿಂದ 50 ಕೋಟಿ ಹೊಂದಿಸಿಕೊಂಡು, ಇನ್ನುಳಿದ 50 ಕೋಟಿ ಸಾಲ ಪಡೆಯಲು ಯೋಜನೆ ರೂಪಿಸಲಾಗುತ್ತಿದೆ’ ಎಂದರು.
‘ಅದೇ ದಿನ ಕಲಘಟಗಿ ತಾಲ್ಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ 27 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಭೂಮಿಪೂಜೆ ನೆರವೇರಿಸಲಿದ್ದಾರೆ. ಫ್ಲೈ ಓವರ್ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಸ್ಥಳೀಯವಾಗಿ ಡೆನಿಸನ್ ಹೋಟೆಲ್‌ನಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ’ ಎಂದು ತಿಳಿಸಿದರು.
Kshetra Samachara
12/01/2021 10:30 am