ಹುಬ್ಬಳ್ಳಿ: ಉತ್ತರ ಕರ್ನಾಟಕದ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ಹುಬ್ಬಳ್ಳಿಯ ಹೃದಯಭಾಗವಾದ ಚೆನ್ನಮ್ಮ ವೃತ್ತದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಪ್ಲೈಓವರ್ ನಿರ್ಮಾಣ ಶಿಲಾನ್ಯಾಸಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಶುಕ್ರವಾರ 15 ರಂದು ಹುಬ್ಬಳ್ಳಿಯ ಡೆನಿಸನ್ಸ್ ಹೊಟೇಲಿನಲ್ಲಿ ಆಯೋಜಿಸಲಾಗಿದ್ದ ವಿಡಿಯೋ ಕಾನ್ಪರೆನ್ಸ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಹಿಸಲಿದ್ದು,ಉತ್ತರ ಕರ್ನಾಟಕದ ಮಹತ್ವದ ಯೋಜನೆಗೆ ಚಾಲನೆ ಸಿಗಲಿದೆ.
ಮಹತ್ವಪೂರ್ಣ ಕಾರ್ಯಕ್ಕೆ ಶುಭಕೋರುವವರು..
ಶಾಸಕರಾದ ಅರವಿಂದ ಬೆಲ್ಲದ,ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ,ಶಂಕರಪಾಟೀಲ ಮುನೇನಕೊಪ್ಪ,ಎಸ್.ವಿ.ಸಂಕನೂರ ಹಾಗೂ ಪ್ರದೀಪ ಶೆಟ್ಟರ್...
ಹು-ಧಾ ಮಹಾನಗರದ ಸಂಚಾರ ದಟ್ಟಣೆ ಕಡಿಮೆ ಮಾಡಿ ಅವಳಿನಗರದ ಸೌಂದರ್ಯವನ್ನು ದ್ವಿಗುಣಗೊಳಿಸುವ ಬಹುನಿರೀಕ್ಷಿತ ಯೋಜನೆಯ ಚಾಲನೆಗೆ ತಮ್ಮೆಲ್ಲರಿಗೂ ಅಭಿನಂದನೆ..
ಸರ್ವರಿಗೂ ಸುಸ್ವಾಗತ...
Kshetra Samachara
14/01/2021 03:34 pm