ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ನೂತನ ತಾ.ಪಂ ಕಾರ್ಯಾಲಯಕ್ಕೆ ಅದ್ಧೂರಿ ಚಾಲನೆ

ಅಣ್ಣಿಗೇರಿ : ಪಟ್ಟಣ ತಾಲ್ಲೂಕಾಗಿ ಪರಿವರ್ತನೆ ಆದ ಹಂತ ಹಂತವಾಗಿ ನೂತನ ತಾಲ್ಲೂಕು ಕಚೇರಿಗಳನ್ನು ಆರಂಭ ಮಾಡುವುದು ಸರ್ಕಾರದ ಮುಖ್ಯ ಕೆಲಸ. ಈ ಹಿನ್ನಲೆಯಲ್ಲಿ ಪಟ್ಟಣದಲ್ಲಿಂದು ನೂತನ ತಾ.ಪಂ ಕಾರ್ಯಾಲಯವನ್ನು ಉದ್ಘಾಟನೆ ಮಾಡುತ್ತಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶಟ್ಟರ ಹೇಳಿದರು. ಅಣ್ಣಿಗೇರಿಯನ್ನು ನೂತನವಾಗಿ ತಾಲ್ಲೂಕು ಕೇಂದ್ರವನ್ನಾಗಿ ಮಾಡಲು ಶಾಸಕ ಶಂಕರಪಾಟೀಲ ಮುನೇನಕೊಪ್ಪ ಕಾರ್ಯ ಅತ್ಯವಶ್ಯಕವಾಗಿದೆ ಎಂದರು.

ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವಲ್ಲಿ ನೂತನ ಗ್ರಾ ಪಂ ಸದಸ್ಯರು ಚಾಚುತಪ್ಪದೇ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. 2023 ರ ಒಳಗೆ ನೂತನ ತಾಲ್ಲೂಕು ಕೇಂದ್ರಕ್ಕೆ ಬೇಕಾಗುವ ಎಲ್ಲ ಕಛೇರಿಗಳನ್ನು ಆರಂಭಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅರ್ಹ ಬಡ ಕುಟುಂಬಗಳಿಗೆ ಆಶ್ರಯ ಮನೆ ವಿತರಣೆ ಮಾಡಲು ಮುಂದಾಗಬೇಕು ಎಂದರು.

ಶಾಸಕ ಶಂಕರಪಾಟೀಲ ಮುನೇನಕೊಪ್ಪ ಮಾತನಾಡಿ, ನಿಮ್ಮೆಲ್ಲರ ಸಹಕಾರದಿಂದ ಪಟ್ಟಣ ತಾಲ್ಲೂಕಾಗಿ ಪರಿವರ್ತನೆಗೊಂಡಿದೆ. ಮುಂಬರುವ ದಿನಗಳಲ್ಲಿಯೂ ಇದೆ ತೆರನಾದ ಸಹಾಯ ಸಹಕಾರ ಇರಲಿ, ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಸರ್ಕಾರ ಈಗಾಗಲೆ 5ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಅತೀ ಶೀಘ್ರದಲ್ಲೇ ಕ್ರೀಡಾಂಗಣಕ್ಕೆ ಚಾಲನೆ ನೀಡಲಾಗುವದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಹಕ್ಜುಪತ್ರಗಳನ್ನು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಜಿ.ಪಂ ಹಾಗೂ ತಾ.ಪಂ ಅಧಿಕಾರಿಗಳು ಮತ್ತು ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

24/01/2021 08:31 pm

Cinque Terre

31.16 K

Cinque Terre

0

ಸಂಬಂಧಿತ ಸುದ್ದಿ