ಧಾರವಾಡ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಪಕ್ಕವೇ ನಿರ್ಮಿಸಲಾಗಿರುವ ವ್ಯಾಯಾಮ ಮೈದಾನ ಹಾಗೂ ವ್ಯಾಯಾಮ ಮಾಡುವ ಪರಿಕರಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು. ಸ್ವತಃ ತಾವೇ ವ್ಯಾಯಾಮ ಮಾಡಿ ಅಧಿಕೃತವಾಗಿ ಆ ಸಾಮಗ್ರಿಗಳನ್ನು ಉದ್ಘಾಟಿಸಿದರು.
ನಂತರ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯು ಸುಮಾರು 45 ಲಕ್ಷ ರೂಪಾಯಿ ಅನುದಾನದಲ್ಲಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಸ್ಕೇಟ್‍ಬಾಲ್, ಹಾಕಿ ಅಂಕಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕೂಡ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ.ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ. ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ವ್ಯಾಯಾಮ ಮೈದಾನ ಹಾಗೂ ವ್ಯಾಯಾಮ ಮಾಡುವ ಪರಿಕರಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ
Kshetra Samachara
26/01/2021 05:00 pm