ಹುಬ್ಬಳ್ಳಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಬೆಂಗೇರಿ ಹಾಗೂ ವಾಳ್ವೇಕರ್ ಕಾಲೋನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಕ್ಷೇತ್ರದ ಶಾಲೆಗಳ ಅಭಿವೃದ್ಧಿ 50 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. 30 ಲಕ್ಷ ವೆಚ್ಚದಲ್ಲಿ ಬೆಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಪೌಂಡ್ ಹಾಗೂ ಫೇಯರ್ಸ್ ಅಳವಡಿಸಲು ಭೂಮಿ ಪೂಜೆ ನೆರವೇರಿಸಲಾಗಿದೆ. ನಿರ್ಮಿತಿ ಕೇಂದ್ರಕ್ಕೆ ಕಾಮಗಾರಿ ಹೊಣೆ ನೀಡಲಾಗಿದೆ . 10 ಲಕ್ಷ ವೆಚ್ಚದಲ್ಲಿ ಉಣಕಲ್ ಪಿ.ಯು. ಕಾಲೇಜು ಹಾಗೂ10 ಲಕ್ಷ ವೆಚ್ಚದಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನೂರು ವರ್ಷದ ಇತಿಹಾಸ ಇರುವ ಸರ್ಕಾರಿ ಶಾಲೆಯನ್ನು ಸಹ ಅಭಿವೃದ್ಧಿ ಪಡೆಸಲಾಗುತ್ತಿದೆ. ವಾಳ್ವೇಕರ್ ಕಾಲೋನಿಯಲ್ಲಿ 25 ಲಕ್ಷ ವೆಚ್ಚದಲ್ಲಿ ಯುಜಿಡಿ ಹಾಗೂ ರಸ್ತೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿದೆ. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೈತರ ಅನುಕೂಲಕ್ಕಾಗಿ ಕೃಷಿ ಕಾಯ್ದೆಗಳಲ್ಲಿ ತಿದ್ದುಪಡಿ ತಂದದಿದ್ದಾರೆ. ರೈತರು ರಾಜಕೀಯ ಪ್ರೇರಣೆಗಳಿಗೆ ಒಳಗಾಗದೆ, ಮೋದಿಯವರ ಮೇಲೆ ವಿಶ್ವಾಸವಿಡಬೇಕು. ಕಾಯ್ದೆಗಳ ಅನುಷ್ಠಾನಕ್ಕೆ ಸಹರಿಸಬೇಕು. ಕಾಯ್ದೆಗಳಿಂದ ರೈತರಿಗೆ ತೊಂದರೆ ಅಥವಾ ಅನಾನುಕೂಲವಾದರೆ ಸರ್ಕಾರವೇ ಕಾಯ್ದೆಗಳನ್ನು ಹಿಂಪಡೆಯುವುದು. ರಾಜ್ಯದಲ್ಲಿ ವಿವಿಧ ಸಮುದಾಯಗಳಿಂದ ನೆಡೆಯುತ್ತಿರುವ ಮೀಸಲಾತಿ ಹೋರಟದ ಕುರಿತು ರಾಜ್ಯ ಸರ್ಕಾರದಿಂದ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸನ್ ಸಿಟಿ ಹೆರಿಟೇಜ್ ಕಾಲೋನಿಯಲ್ಲಿ 34 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕುಡಿಯುವ ನೀರಿನ ಪೈಪ್ ಲೈನ್ ಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
Kshetra Samachara
08/02/2021 11:18 am